ಮಡಿಕೇರಿ : ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಸಮಿತಿಯ ಪ್ರಮುಖರ ಸಭೆ ನಗರದ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಟದ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿ, ಕೊಡಗು ಜಿಲ್ಲೆಯಲ್ಲಿ ತುಳು ಭಾಷಿಕರ ಕ್ಷೇಮಾಭಿವೃದ್ಧಿಗೆ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಜಿಲ್ಲೆಯಲ್ಲಿ ತುಳು ಬಾಂಧವರ ಪದ್ಧತಿ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಜಿಲ್ಲಾ ಸಮಿತಿ ಸೇರಿದಂತೆ ಮೂರು ತಾಲೂಕು ಸಮಿತಿಗಳನ್ನು ಆಗಸ್ಟ್ ತಿಂಗಳಿನಲ್ಲಿ ಪುನರ್ ರಚಿಸಿ ಸಂಘಟನೆಯನ್ನು ಬಲಿಷ್ಠಗೊಳಿಸಲು ಕ್ರಮ ಕೈಗೊಳ್ಳಲಾಗುವುದೆಂದರು.
ಜಿಲ್ಲಾ ಗೌರವ ಸಲಹೆಗಾರ ಬಿ.ಬಿ.ಐತ್ತಪ್ಪ ರೈ , ಜಿಲ್ಲಾ ಸಂಘದ ಸ್ಥಾಪಕ ಸಲಹೆಗಾರ ಕೆ.ಆರ್.ಬಾಲಕೃಷ್ಣ ರೈ , ಜಿಲ್ಲಾ ಉಪಾಧ್ಯಕ್ಷ ಬಿ.ವೈ.ಆನಂದರಘು , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ಮಾತನಾಡಿದರು.
ಸಭೆಯಲ್ಲಿ ಮಂಗಳೂರಿನ ಹರೀಶ್ ಆಳ್ವ ಸಂಘಟನೆಯನ್ನು ಬಲ ಪಡಿಸಲು ಪೂರಕವಾದ ಸಲಹೆ ಸೂಚನೆಗಳನ್ನು ನೀಡಿದರು.
ಕೂಟದ ಜಿಲ್ಲಾ ಉಪಾಧ್ಯಕ್ಷರಾದ ಸಂಧ್ಯಾ ಗಣೇಶ್ ರೈ, ಮಡಿಕೇರಿ ತಾಲೂಕು ನಿರ್ದೇಶಕರುಗಳಾದ ಆರ್.ಬಿ.ರವಿ, ಲೀಲಾ ಶೇಷಮ್ಮ, ಮಡಿಕೇರಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ತಾಲೂಕು ಸದಸ್ಯ ಜಗದೀಶ್ ಆಚಾರ್ಯ ಸೇರಿದಂತೆ ಹಲವರು ಸೂಕ್ತ ಸಲಹೆಗಳನ್ನು ನೀಡಿ ಗಮನ ಸೆಳೆದರು. ಪಿ.ಎಂ.ರವಿ ನಿರೂಪಿಸಿ, ವಂದಿಸಿದರು. ಫೋಟೋ
26.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಇಂದು ರಾಷ್ಟ್ರೀಯ ರೈತ ದಿನ. ಈ ದೇಶದಲ್ಲಿ ಕೃಷಿಯ ಪ್ರಾಧಾನ್ಯತೆ ಬಹಳಷ್ಟಿದೆ. ಕೃಷಿಗಾಗಿ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಡಿ.26 ರಂದು ತಮಿಳುನಾಡು ಕರಾವಳಿಯ ಬಳಿ ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು…
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಶಾಲಾ ವಠಾರದಲ್ಲಿ ಪಾವಂಜೆ ಶ್ರೀ ಜ್ಞಾನಶಕ್ತಿ…
23.12.24ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…