ಮಡಿಕೇರಿ :ನಟ ಹುಚ್ಚ ವೆಂಕಟನ ಹುಚ್ಚಾಟದಿಂದ ಬೇಸತ್ತ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.
ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಮಾರುತಿ ಕಾರೊಂದಕ್ಕೆ ಹಾನಿಗೊಳಿಸಿದ ಕಾರಣಕ್ಕಾಗಿ ಅಸಮಾಧಾನಗೊಂಡ ಕೆಲವು ಯುವಕರು ವೆಂಕಟನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದರು.
ನಗರದ ಕೆ ಎಸ್ ಆರ್ ಟಿಸಿ ಬಸ್ ಡಿಪೋ ಬಳಿ ಇಂದು ಮಧ್ಯಾಹ್ನ ದಿಢೀರ್ ಆಗಿ ಪ್ರತ್ಯಕ್ಷವಾದ ಹುಚ್ಚ ವೆಂಕಟ್ ದಾರಿ ಬದಿಯಲ್ಲಿ ನಿಂತಿದ್ದರು. ಇವರನ್ನು ಗಮನಿಸಿದ ದಿಲೀಪ್ ಎಂಬ ಯುವಕ “ನೀವು ಹುಚ್ಚ ವೆಂಕಟ್ ಅಲ್ವಾ” ಎಂದು ಕುತೂಹಲದಿಂದ ಕೇಳಿದ್ದಾರೆ. ಇದನ್ನೇ ತಪ್ಪಾಯಿತು ಎಂದು ಭಾವಿಸಿದ ವೆಂಕಟ್ “ಏನೋ ಗುರಾಯಿಸ್ತೀಯ” ಎಂದು ದಿಲೀಪ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತಪ್ಪಿಸಿಕೊಂಡು ಓಡುತ್ತಿದ್ದಂತೆ ಕುಪಿತಗೊಂಡ ವೆಂಕಟ್ ಯುವಕನ ಮಾರುತಿ-800 ಕಾರಿನ ಗಾಜನ್ನು ಪುಡಿ ಮಾಡಿದ್ದಾನೆ.
ಹುಚ್ಚ ವೆಂಕಟನ ಹುಚ್ಚಾಟ ಮಿತಿ ಮೀರುತ್ತಿದ್ದಂತೆ ಎಚ್ಚೆತ್ತುಕೊಂಡ ಸಾರ್ವಜನಿಕರು ಸರಿಯಾಗಿಯೇ ಗೂಸ ನೀಡಿದ್ದಾರೆ. ಸ್ಥಳಕ್ಕೆ ಬಂದ ನಗರ ಠಾಣಾ ಪೊಲೀಸರು ವೆಂಕಟನನ್ನು ಠಾಣೆಗೆ ಕರೆದೊಯ್ದು ಬುದ್ದಿ ಹೇಳಿದ್ದಾರೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…