ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ್ ಕುಮಾರ್ ಅವರ ಸಮ್ಮುಖದಲ್ಲಿ ಪ್ರಕರಣದ ಕುರಿತು ರೂಪೇಶ್‍ನ ವಿಚಾರಣೆ ನಡೆಯಿತು. ನ್ಯಾಯಾಧೀಶರು ಮುಂದಿನ ವಿಚಾರಣೆಯನ್ನು ನ.14ಕ್ಕೆ ಮುಂದೂಡಿದರು.
ನ್ಯಾಯಾಲಯದ ಮುಖ್ಯ ದ್ವಾರದಿಂದ ಹೊರ ಬಂದ ರೂಪೇಶ್ ಯಾವುದೇ ಘೋಷಣೆಗಳನ್ನು ಮೊಳಗಿಸದೆ ಪೊಲೀಸ್ ವಾಹನವೇರಿದ. ಬಳಿಕ ಬಿಗಿ ಪೊಲೀಸ್ ಭದ್ರತೆಯಲ್ಲಿ ರೂಪೇಶ್‍ನನ್ನು ಕೇರಳದ ವೈವೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
ಕೇಂದ್ರ ಹಾಗೂ ರಾಜ್ಯ ಗುಪ್ತದಳ, ರಾಜ್ಯ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಫ್ತಿಯಲ್ಲಿ ನ್ಯಾಯಾಲಯಲ್ಲಿ ಹಾಜರಿದ್ದರು.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…