ಮಡಿಕೇರಿ : ಜಿಲ್ಲಾ ವಿಪತ್ತು ನಿರ್ವಹಣಾ ಸಭೆ : ಮಳೆ ಮುನ್ನೆಚ್ಚರಿಕಾ ಕ್ರಮದ ಕುರಿತು ಚರ್ಚೆ

July 11, 2019
12:00 PM

ಮಡಿಕೇರಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಆದರೆ ಕಳೆದೆರಡು ದಿನಗಳಿಂದ ಬಲವಾದ ಗಾಳಿ ಬೀಸುತ್ತಿದ್ದು, ಜೊತೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ನಡುವೆ ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಜಿಲ್ಲಾಡಳಿತ ಈಗಾಗಲೇ ಕೈಗೊಂಡಿದ್ದು, ವಿಪತ್ತಿನಿಂದ ಸಂಭವಿಸಬಹುದಾದ ಹಾನಿ ಕಡಿಮೆಗೊಳಿಸುವ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.
ತುರ್ತಾಗಿ ಕೊಡಗು ಜಿಲ್ಲೆಗೆ ಸಮಗ್ರ ಪುನರ್ ನಿರ್ಮಾಣ, ಹಾನಿ ತಗ್ಗಿಸುವ ಕ್ರಮಗಳನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಲು ಮತ್ತು ರಚನಾತ್ಮಕ ಯೋಜನೆ ರೂಪಿಸಲು ವಿಷಯ ತಜ್ಞರು, ಸ್ಥಳೀಯರ ಹಾಗೂ ಸಂಬಂಧಪಟ್ಟವರ ಜೊತೆಗೂಡಿಸಿ, ಕಾರ್ಯಾಗಾರವನ್ನು ಏರ್ಪಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಗ್ರಾಮೀಣ ಮಟ್ಟದಲ್ಲಿ ರೂಪಿಸುತ್ತಿರುವ ಗ್ರಾಮೀಣ ವಿಪತ್ತು ನಿರ್ವಹಣಾ ಯೋಜನೆಯನ್ನು ಪ್ರಥಮ ಹಂತದಲ್ಲಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಜಿಲ್ಲೆಯ ಸೂಕ್ಷ್ಮ ಗ್ರಾಮ ಪಂಚಾಯತ್‍ಗಳಲ್ಲಿ ಪ್ರಥಮ ಹಂತದಲ್ಲಿ ಇತರ ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸಿ ಗ್ರಾಮೀಣಾಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವಂತೆ ಚರ್ಚಿಸಲಾಯಿತು.
ಇದರೊಂದಿಗೆ ವಿಪತ್ತು ನಿರ್ವಹಣೆ ಸಂಬಂಧಿಸಿದಂತೆ ಮಹಿಳಾ, ಮಕ್ಕಳ, ಸಮುದಾಯ ಕೇಂದ್ರಿತ ಮತ್ತು ವಿವಿಧ ತರಬೇತಿಗಳನ್ನು ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿಪತ್ತು ಪರಿಹಾರವನ್ನು ಸುಸೂತ್ರವಾಗಿ ಅರ್ಹರಿಗೆ ತಲುಪಿಸಲು ಸಹಕಾರವಾಗುವಂತೆ ತಾಲ್ಲೂಕು ಮಟ್ಟ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಾಯ್ದೆ ಮತ್ತು ಪರಿಹಾರ ಲಭ್ಯತೆಯ ಬಗ್ಗೆ ತರಬೇತಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಪ್ರಾಧಿಕಾರದ ಸದಸ್ಯರಾದ ಜಿ.ಪಂ.ಸಿಇಓ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜು, ಆರ್‍ಸಿಎಚ್. ಅಧಿಕಾರಿ ಡಾ.ಆನಂದ್, ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರ್ ಶ್ರೀಕಂಠಯ್ಯ, ಯುನಿಸೆಫ್ ಸಮಾಲೋಚಕರಾದ ಪ್ರಭಾತ್ ಕಲ್ಕೂರ ಇತರರು ಹಾಜರಿದ್ದರು.

Advertisement
Advertisement
Advertisement

ಈ ನಡುವೆ ಸಂಪಿಗೆಕಟ್ಟೆ ಬಳಿ ಬಿರುಕು ಬಿಟ್ಟಿದ್ದ ರಸ್ತೆ ಕಾಮಗಾರಿಯನ್ನು ಸರಿಪಡಿಸಲಾಗಿದ್ದು, ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಲಾಗಿದೆ ಎಂದು ನಗರಸಭೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ
ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ
November 23, 2024
6:12 AM
by: The Rural Mirror ಸುದ್ದಿಜಾಲ
ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ
November 23, 2024
6:06 AM
by: The Rural Mirror ಸುದ್ದಿಜಾಲ
ಅಡಿಕೆ ಹಳದಿರೋಗ ಪೀಡಿತ ಪ್ರದೇಶದಲ್ಲಿ ಗೇರುಕೃಷಿ ಹೇಗೆ..? | ಸಂಪಾಜೆಯಲ್ಲಿ ಪರ್ಯಾಯ ಕೃಷಿಯ ಬಗ್ಗೆ ಚಿಂತನೆ |
November 23, 2024
5:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror