ಮಡಿಕೇರಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಆದರೆ ಕಳೆದೆರಡು ದಿನಗಳಿಂದ ಬಲವಾದ ಗಾಳಿ ಬೀಸುತ್ತಿದ್ದು, ಜೊತೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ನಡುವೆ ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಜಿಲ್ಲಾಡಳಿತ ಈಗಾಗಲೇ ಕೈಗೊಂಡಿದ್ದು, ವಿಪತ್ತಿನಿಂದ ಸಂಭವಿಸಬಹುದಾದ ಹಾನಿ ಕಡಿಮೆಗೊಳಿಸುವ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.
ತುರ್ತಾಗಿ ಕೊಡಗು ಜಿಲ್ಲೆಗೆ ಸಮಗ್ರ ಪುನರ್ ನಿರ್ಮಾಣ, ಹಾನಿ ತಗ್ಗಿಸುವ ಕ್ರಮಗಳನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಲು ಮತ್ತು ರಚನಾತ್ಮಕ ಯೋಜನೆ ರೂಪಿಸಲು ವಿಷಯ ತಜ್ಞರು, ಸ್ಥಳೀಯರ ಹಾಗೂ ಸಂಬಂಧಪಟ್ಟವರ ಜೊತೆಗೂಡಿಸಿ, ಕಾರ್ಯಾಗಾರವನ್ನು ಏರ್ಪಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಗ್ರಾಮೀಣ ಮಟ್ಟದಲ್ಲಿ ರೂಪಿಸುತ್ತಿರುವ ಗ್ರಾಮೀಣ ವಿಪತ್ತು ನಿರ್ವಹಣಾ ಯೋಜನೆಯನ್ನು ಪ್ರಥಮ ಹಂತದಲ್ಲಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಜಿಲ್ಲೆಯ ಸೂಕ್ಷ್ಮ ಗ್ರಾಮ ಪಂಚಾಯತ್‍ಗಳಲ್ಲಿ ಪ್ರಥಮ ಹಂತದಲ್ಲಿ ಇತರ ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸಿ ಗ್ರಾಮೀಣಾಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವಂತೆ ಚರ್ಚಿಸಲಾಯಿತು.
ಇದರೊಂದಿಗೆ ವಿಪತ್ತು ನಿರ್ವಹಣೆ ಸಂಬಂಧಿಸಿದಂತೆ ಮಹಿಳಾ, ಮಕ್ಕಳ, ಸಮುದಾಯ ಕೇಂದ್ರಿತ ಮತ್ತು ವಿವಿಧ ತರಬೇತಿಗಳನ್ನು ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿಪತ್ತು ಪರಿಹಾರವನ್ನು ಸುಸೂತ್ರವಾಗಿ ಅರ್ಹರಿಗೆ ತಲುಪಿಸಲು ಸಹಕಾರವಾಗುವಂತೆ ತಾಲ್ಲೂಕು ಮಟ್ಟ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಾಯ್ದೆ ಮತ್ತು ಪರಿಹಾರ ಲಭ್ಯತೆಯ ಬಗ್ಗೆ ತರಬೇತಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಪ್ರಾಧಿಕಾರದ ಸದಸ್ಯರಾದ ಜಿ.ಪಂ.ಸಿಇಓ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜು, ಆರ್‍ಸಿಎಚ್. ಅಧಿಕಾರಿ ಡಾ.ಆನಂದ್, ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರ್ ಶ್ರೀಕಂಠಯ್ಯ, ಯುನಿಸೆಫ್ ಸಮಾಲೋಚಕರಾದ ಪ್ರಭಾತ್ ಕಲ್ಕೂರ ಇತರರು ಹಾಜರಿದ್ದರು.
ಈ ನಡುವೆ ಸಂಪಿಗೆಕಟ್ಟೆ ಬಳಿ ಬಿರುಕು ಬಿಟ್ಟಿದ್ದ ರಸ್ತೆ ಕಾಮಗಾರಿಯನ್ನು ಸರಿಪಡಿಸಲಾಗಿದ್ದು, ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಲಾಗಿದೆ ಎಂದು ನಗರಸಭೆ ತಿಳಿಸಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…