ಮಡಿಕೇರಿ : ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣದ ನಿವಾಸಿ, ಸಿದ್ದರಾಜು(22) ಎಂಬಾತನೇ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್ದಾನೆ.
ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿದ್ದರಾಜು, ಕೊಡಗು ಜಿಲ್ಲಾ ಪೊಲೀಸರಿಂದ ಬಂಧಿಸಲ್ಪಟ್ಟು ಕಳೆದ 4 ತಿಂಗಳಿಂದ ಮಡಿಕೇರಿಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧಿಯಾಗಿದ್ದ. ಇಂದು ಸಂಜೆ 5 ಗಂಟೆ ಸುಮಾರಿಗೆ ಸಿದ್ದರಾಜು, ಸೆಲ್‍ನ ಒಳಗಿನ ಶೌಚಾಲಯದ ಗೋಡೆಯಲ್ಲಿದ್ದ ನೀರಿನ ಪೈಪ್‍ಗೆ ಸ್ಕ್ರೀನ್‍ನ ಒಂದು ತುಂಡನ್ನು ಹಗ್ಗದಂತೆ ಬಳಸಿಕೊಂಡು ನೇಣು ಬಿಗಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.
ಇದನ್ನು ಗಮನಿಸಿದ ಜೈಲು ಸಿಬ್ಬಂದಿಗಳು ತಕ್ಷಣ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಆತ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.