ಮಡಿಕೇರಿ:ಇತಿಹಾಸ ಪ್ರಸಿದ್ಧ ಮಡಿಕೇರಿ ದಸರಾ ಜನೋತ್ಸವ ಆಚರಣೆಗೆ 1 ಕೋಟಿ ರೂ. ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಡಿಕೇರಿ ದಸರಾ ಸಮಿತಿಯ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ನಗರ ದಸರಾ ಸಮಿತಿ ನಿಯೋಗವು ದಸರಾ ಉತ್ಸವಾಚರಣೆಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿದಂತೆ ಮಾತನಾಡಿದ ಮುಖ್ಯಮಂತ್ರಿಗಳು 1 ಕೋಟಿ ರೂ. ಅನುದಾನ ನೀಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ್ದಾರೆ.
ದಸರಾ ಸಮಿತಿ ನಿಯೋಗದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಹ್ಮಣಿ, ದಸರಾ ಸಮಿತಿ ಅಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ಉಪಾಧ್ಯಕ್ಷ ನೆರವಂಡ ಜೀವನ್, ಖಜಾಂಜಿ ಉಮೇಶ್ ಸುಬ್ರಹ್ಮಣಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಆರ್.ಬಿ.ರವಿ ಮತ್ತಿತರರು ಹಾಜರಿದ್ದರು.
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ…
ಸಮಾಜದಲ್ಲಿ ಯಾಕೆ ಇಷ್ಟೊಂದು ಸಿಟ್ಟು? ಅತ್ಯಂತ ಗಂಭೀರವಾದ ಪ್ರಶ್ನೆಗೆ ಬಂದಿರುವ ಉತ್ತರ ಪ್ರತಿಕ್ರಿಯೆಗಳಲ್ಲಿ…
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು…
ಅಡಿಕೆಯ ಮೇಲೆ ಕ್ಯಾನ್ಸರ್ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…