ಮಡಿಕೇರಿ-ಸಂಪಾಜೆ ರಸ್ತೆಯ ಕಾಟಿಕೇರಿ ಬಳಿ ರಸ್ತೆಯಲ್ಲಿ ಬಿರುಕು

July 5, 2019
8:34 AM

ಸಂಪಾಜೆ: ಮಾಣಿ – ಮಡಿಕೇರಿ ರಸ್ತೆಯ ಸಂಪಾಜೆ ಘಾಟಿ ರಸ್ತೆಯ ಕಾಟಿಕೇರಿ ಬಳಿ ರಸ್ತೆ ಬಿರುಕು ಬಿಟ್ಟಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಕಳೆದ ಎರಡು ದಿನಗಳಿಂದ ಮಡಿಕೇರಿ ಹಾಗೂ ಸಂಪಾಜೆ ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಇದೀಗ ಕಾಟಿಕೇರಿ ಬಳಿ ಕಳೆದ ವರ್ಷದ ಭೂಕುಸಿತವಾದ ಪ್ರದೇಶದಲ್ಲಿಯೇ ಬಿರುಕು ಕಂಡುಬಂದಿದೆ.  ಇಲ್ಲಿ ತಡೆಗೊಡೆ ನಿರ್ಮಾಣ ಮಾಡಲಾಗಿತ್ತು. ಇದೀಗ ರಸ್ತೆ ಬಿರುಕು ಕಾರಣದಿಂದ ಘನ ವಾಹನಗಳ ಓಡಾಟಕ್ಕೆ ನಿಯಂತ್ರಣ ಮಾಡಲಾಗಿದೆ.

 

ಮಳೆಯ ಕಾರಣದಿಂದ ಪ್ರತೀ ವರ್ಷದಂತೆ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿತೇ ಅಥವಾ ಕಳೆದ ವರ್ಷದ ಜಲಪ್ರಳಯದ ಪರಿಣಾಮವಾಗಿ ಈಗ ಮಳೆ ಸುರಿದಾಗ ರಸ್ತೆ ಬಿರುಕು ಬಿಟ್ಟಿದ್ದೇ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಯಾವುದೇ ಆತಂಕದ ಸ್ಥಿತಿ ಇಲ್ಲ. ಸಣ್ಣ ಪ್ರಮಾಣದಲ್ಲಿ ಮಾತ್ರವೇ ಬಿರುಕು ಕಾಣಿಸಿಕೊಂಡಿದೆ.

ರಸ್ತೆ ಬಿರುಕು ಬಿಟ್ಟಿರುವ ಬಗ್ಗೆ ಕೊಡಗು ಜಿಲ್ಲಾಧಿಕಾರಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ  ನೀಡಿದ್ದಾರೆ. ಹೆದ್ದಾರಿ ಇಲಾಖೆಯ ಇಂಜಿನಿಯರ್ ಗಳಿಗೆ  ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಬ್ಯಾರಿಕೇಡ್ ಅಳವಡಿಕೆ ಮಾಡಿ ವಾಹನ ಸಂಚಾರದಲ್ಲಿ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ.

 

 

ರಸ್ತೆ ಬಿರುಕು ಬಿಟ್ಟಿರುವ  ವಿಡಿಯೋ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror