ಸಂಪಾಜೆ: ಮಾಣಿ – ಮಡಿಕೇರಿ ರಸ್ತೆಯ ಸಂಪಾಜೆ ಘಾಟಿ ರಸ್ತೆಯ ಕಾಟಿಕೇರಿ ಬಳಿ ರಸ್ತೆ ಬಿರುಕು ಬಿಟ್ಟಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ದಿನಗಳಿಂದ ಮಡಿಕೇರಿ ಹಾಗೂ ಸಂಪಾಜೆ ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಇದೀಗ ಕಾಟಿಕೇರಿ ಬಳಿ ಕಳೆದ ವರ್ಷದ ಭೂಕುಸಿತವಾದ ಪ್ರದೇಶದಲ್ಲಿಯೇ ಬಿರುಕು ಕಂಡುಬಂದಿದೆ. ಇಲ್ಲಿ ತಡೆಗೊಡೆ ನಿರ್ಮಾಣ ಮಾಡಲಾಗಿತ್ತು. ಇದೀಗ ರಸ್ತೆ ಬಿರುಕು ಕಾರಣದಿಂದ ಘನ ವಾಹನಗಳ ಓಡಾಟಕ್ಕೆ ನಿಯಂತ್ರಣ ಮಾಡಲಾಗಿದೆ.
ಮಳೆಯ ಕಾರಣದಿಂದ ಪ್ರತೀ ವರ್ಷದಂತೆ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿತೇ ಅಥವಾ ಕಳೆದ ವರ್ಷದ ಜಲಪ್ರಳಯದ ಪರಿಣಾಮವಾಗಿ ಈಗ ಮಳೆ ಸುರಿದಾಗ ರಸ್ತೆ ಬಿರುಕು ಬಿಟ್ಟಿದ್ದೇ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಯಾವುದೇ ಆತಂಕದ ಸ್ಥಿತಿ ಇಲ್ಲ. ಸಣ್ಣ ಪ್ರಮಾಣದಲ್ಲಿ ಮಾತ್ರವೇ ಬಿರುಕು ಕಾಣಿಸಿಕೊಂಡಿದೆ.
ರಸ್ತೆ ಬಿರುಕು ಬಿಟ್ಟಿರುವ ಬಗ್ಗೆ ಕೊಡಗು ಜಿಲ್ಲಾಧಿಕಾರಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಹೆದ್ದಾರಿ ಇಲಾಖೆಯ ಇಂಜಿನಿಯರ್ ಗಳಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಬ್ಯಾರಿಕೇಡ್ ಅಳವಡಿಕೆ ಮಾಡಿ ವಾಹನ ಸಂಚಾರದಲ್ಲಿ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ.
ರಸ್ತೆ ಬಿರುಕು ಬಿಟ್ಟಿರುವ ವಿಡಿಯೋ
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…