ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಮಹಾಮಳೆಯಿಂದ ಹಾನಿಗೀಡಾಗಿರುವ ರಸ್ತೆ ಹಾಗೂ ಸೇತುವೆಗಳ ದುರಸ್ತಿ ಕಾರ್ಯಕ್ಕೆ ಲೋಕೋಪಯೋಗಿ ಇಲಾಖೆ ಮೂಲಕ ಹೆಚ್ಚುವರಿಯಾಗಿ 58 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಭರವಸೆ ನೀಡಿದ್ದಾರೆ.
ಮಳೆಹಾನಿಗೀಡಾದ ಮಡಿಕೇರಿ-ಸಂಪಾಜೆ ಮಾರ್ಗ ರಾಷ್ಟ್ರೀಯ ಹೆದ್ದಾರಿಗೆ ಭೇಟಿ ನೀಡಿದ ಅವರು, ಮಡಿಕೇರಿ, ಕಾಟಕೇರಿ, 2 ನೇ ಮೊಣ್ಣಂಗೇರಿ ಬಳಿ ಕುಸಿದಿರುವ ರಾಷ್ಟ್ರೀಯ ಹೆದ್ದಾರಿಯನ್ನು ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದ ಎಂ.ಕಾರಜೋಳ ಅವರು ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಮಡಿಕೇರಿ-ಸಂಪಾಜೆ, ಕೊಣನೂರು-ಮಾಕುಟ್ಟ, ವಿರಾಜಪೇಟೆ-ಕೊಡ್ಲಿಪೇಟೆ ಹೀಗೆ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ರಸ್ತೆಗಳು ಕುಸಿದಿವೆ, ಸೇತುವೆಗಳು ಹದಗೆಟ್ಟಿವೆ ಆ ನಿಟ್ಟಿನಲ್ಲಿ ರಸ್ತೆ, ಸೇತುವೆಗಳನ್ನು ಪುನರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಈಗಾಗಲೇ ಮುಖ್ಯಮಂತ್ರಿ ಅವರು 536 ಕೋಟಿ ರೂ. ವಿಶೇಷ ಪ್ಯಾಕೇಜ್‍ನ್ನು ಘೋಷಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಿಂದ ಹೆಚ್ಚುವರಿಯಾಗಿ 58 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ರಸ್ತೆ ಮತ್ತು ಸೇತುವೆಗಳು ಹದಗೆಡುತ್ತಿವೆ. ಆದ್ದರಿಂದ ಶಾಶ್ವತ ಕಾಮಗಾರಿ ನಿರ್ಮಾಣ ಮಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದರು.
ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಒ ಕೆ.ಲಕ್ಷ್ಮೀಪ್ರಿಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್, ಮುಖ್ಯ ಎಂಜಿನಿಯರ್ ರಮೇಂದ್ರ, ಮಂಗಳೂರು ವಿಭಾಗದ ಅಧೀಕ್ಷಕರ ಎಂಜಿನಿಯರ್ ಕಾಂತರಾಜು, ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಮ್, ಸುರೇಶ್, ರಾಷ್ಟ್ರೀಯ ಹೆದ್ದಾರಿ ವಿಭಾಗದ ಮುಖ್ಯ ಎಂಜಿನಿಯರ್ ಗಣೇಶ್, ಅಧೀಕ್ಷಕ ಎಂಜಿನಿಯರ್ ರಾಘವನ್, ಕಾರ್ಯಪಾಲಕ ಎಂಜಿನಿಯರ್ ಹೊಳ್ಳ ಇತರರು ಹಾಜರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…