Advertisement
ಸುದ್ದಿಗಳು

ಮಡಿಕೇರಿ-ಸಂಪಾಜೆ ರಸ್ತೆ ದುರಸ್ತಿಗೆ ಹೆಚ್ಚುವರಿಯಾಗಿ 58 ಕೋಟಿ ರೂ. ಬಿಡುಗಡೆಯ ಭರವಸೆ

Share

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಮಹಾಮಳೆಯಿಂದ ಹಾನಿಗೀಡಾಗಿರುವ ರಸ್ತೆ ಹಾಗೂ ಸೇತುವೆಗಳ ದುರಸ್ತಿ ಕಾರ್ಯಕ್ಕೆ ಲೋಕೋಪಯೋಗಿ ಇಲಾಖೆ ಮೂಲಕ ಹೆಚ್ಚುವರಿಯಾಗಿ 58 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಭರವಸೆ ನೀಡಿದ್ದಾರೆ.

ಮಳೆಹಾನಿಗೀಡಾದ ಮಡಿಕೇರಿ-ಸಂಪಾಜೆ ಮಾರ್ಗ ರಾಷ್ಟ್ರೀಯ ಹೆದ್ದಾರಿಗೆ ಭೇಟಿ ನೀಡಿದ ಅವರು, ಮಡಿಕೇರಿ, ಕಾಟಕೇರಿ, 2 ನೇ ಮೊಣ್ಣಂಗೇರಿ ಬಳಿ ಕುಸಿದಿರುವ ರಾಷ್ಟ್ರೀಯ ಹೆದ್ದಾರಿಯನ್ನು ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದ ಎಂ.ಕಾರಜೋಳ ಅವರು ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಮಡಿಕೇರಿ-ಸಂಪಾಜೆ, ಕೊಣನೂರು-ಮಾಕುಟ್ಟ, ವಿರಾಜಪೇಟೆ-ಕೊಡ್ಲಿಪೇಟೆ ಹೀಗೆ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ರಸ್ತೆಗಳು ಕುಸಿದಿವೆ, ಸೇತುವೆಗಳು ಹದಗೆಟ್ಟಿವೆ ಆ ನಿಟ್ಟಿನಲ್ಲಿ ರಸ್ತೆ, ಸೇತುವೆಗಳನ್ನು ಪುನರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಈಗಾಗಲೇ ಮುಖ್ಯಮಂತ್ರಿ ಅವರು 536 ಕೋಟಿ ರೂ. ವಿಶೇಷ ಪ್ಯಾಕೇಜ್‍ನ್ನು ಘೋಷಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಿಂದ ಹೆಚ್ಚುವರಿಯಾಗಿ 58 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ರಸ್ತೆ ಮತ್ತು ಸೇತುವೆಗಳು ಹದಗೆಡುತ್ತಿವೆ. ಆದ್ದರಿಂದ ಶಾಶ್ವತ ಕಾಮಗಾರಿ ನಿರ್ಮಾಣ ಮಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದರು.

ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಒ ಕೆ.ಲಕ್ಷ್ಮೀಪ್ರಿಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್, ಮುಖ್ಯ ಎಂಜಿನಿಯರ್ ರಮೇಂದ್ರ, ಮಂಗಳೂರು ವಿಭಾಗದ ಅಧೀಕ್ಷಕರ ಎಂಜಿನಿಯರ್ ಕಾಂತರಾಜು, ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಮ್, ಸುರೇಶ್, ರಾಷ್ಟ್ರೀಯ ಹೆದ್ದಾರಿ ವಿಭಾಗದ ಮುಖ್ಯ ಎಂಜಿನಿಯರ್ ಗಣೇಶ್, ಅಧೀಕ್ಷಕ ಎಂಜಿನಿಯರ್ ರಾಘವನ್, ಕಾರ್ಯಪಾಲಕ ಎಂಜಿನಿಯರ್ ಹೊಳ್ಳ ಇತರರು ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…

13 hours ago

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…

20 hours ago

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

1 day ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

2 days ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

2 days ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

3 days ago