ಪುತ್ತೂರು: ನಮ್ಮ ದೇಶದ ಇತಿಹಾಸ, ಸಂಸ್ಕೃತಿಯನ್ನು ಯಾವುದೇ ಕಾರಣಕ್ಕೂ ನಾಶ ಮಾಡಲು ಸಾಧ್ಯವಿಲ್ಲ. ಅದಕ್ಕೆ ಉದಾಹರಣೆ ಎಂದರೆ ಹಲವು ವಿದೇಶಿಯರ ದಾಳಿಯನ್ನು ಎದುರಿಸಿದ ಭಾರತ ಇಂದಿಗೂ ತನ್ನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಬಿಟ್ಟುಕೊಟ್ಟಿಲ್ಲ. ಯಾವುದೇ ರೀತಿಯಲ್ಲಿಯೂ ತನ್ನತನವನ್ನು ಕಳೆದುಕೊಂಡಿಲ್ಲ. ಪಾಶ್ಚತ್ಯ ಸಂಸ್ಕೃತಿಯ ಪ್ರಭಾವಗಳು ಹೊರ ನೋಟಕ್ಕೆ ಕಂಡು ಬಂದರೂ ಭಾರತೀಯತೆಯನ್ನು ನಾವೆಲ್ಲರೂ ಮರೆತಿಲ್ಲ ಎನ್ನುವುದು ಸಂತಸದ ವಿಚಾರ ಎಂದು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ರವಿಶಂಕರ್ ಜಿ.ಕೆ. ಹೇಳಿದರು.
ಅವರು ಇಲ್ಲಿನ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸುವ ಮಣಿಕರ್ಣಿಕ ಮಾತುಗಾರರ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ‘ಸಾರೇ ಜಹಾಂಸೇ ಅಚ್ಛಾ’ ಎಂಬ ವಿಷಯದ ಬಗ್ಗೆ ಗುರುವಾರ ಮಾತನಾಡಿದರು. ನಮ್ಮ ದೇಶದ ಅಭಿವೃದ್ಧಿ ನಮ್ಮ ಕೈಗಳಲ್ಲಿದೆ. ಇಂದಿನ ವಾಸ್ತವತೆಯನ್ನು ಒಪ್ಪಿಕೊಂಡು ಮುಂದಿನ ಹಾದಿಯನ್ನು ಕಂಡುಕೊಂಡಾಗ ಒಂದು ಉತ್ತಮ ದೇಶವಾಗಿ ರೂಪಿಸಲು ಸಾಧ್ಯ. ಅದೇ ರೀತಿ ನಮ್ಮ ಸ್ವಾತಂತ್ರ್ಯದ ಬಳಿಕ ಭಾರತದ ಬಗ್ಗೆ ನಮ್ಮ ಯುವಕರಲ್ಲಿ ಹಲವು ರೀತಿಯ ದೃಷ್ಟಿಕೋನವಿದ್ದರೂ, ಅದನ್ನು ಕಾರ್ಯ ರೂಪಕ್ಕೆ ತರುವಲ್ಲಿ ಎಡವುತ್ತಿದ್ದಾರೆ. ಕೆಲವೊಂದು ವಿಚಾರಗಳ ಬಗೆಗಿನ ಅಲ್ಪ ಜ್ಞಾನವನ್ನಿಟ್ಟುಕೊಂಡು ಹಲವು ರೀತಿಯ ಅಭಿಪ್ರಾಯಗಳನ್ನು ತಿಳಿಸುವುದರ ಮೂಲಕ ಇಕ್ಕಟ್ಟಿಗೆ ಸಿಲುಕುತ್ತಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಸರಿಯಾಗಿ ಗಮನಿಸುವುದರ ಮೂಲಕ ಪರಿಹಾರವನ್ನು ಹುಡುಕಾಡುವ ಪ್ರಯತ್ನವನ್ನು ಮಾಡುವ ಎಂದು ಅಭಿಪ್ರಾಯಪಟ್ಟರು.
ವಾರದ ಉತ್ತಮ ಮಾತುಗಾರಾಗಿ ತೃತೀಯ ವರ್ಷದ ವಿದ್ಯಾರ್ಥಿಗಳಾದ ಅನಘಾ ಶಿವರಾಮ್ ಹಾಗೂ ರಾಮ್ ಕಿಶನ್ ಆಯ್ಕೆಯಾದರು. ದ್ವಿತೀಯ ವರ್ಷದ ಪತ್ರಿಕೋದ್ಯಮ ತರಗತಿಯು ಉತ್ತಮ ಮಾತುಗಾರರ ತಂಡವಾಗಿ ಹೊರಹೊಮ್ಮಿತು. ವಿದ್ಯಾರ್ಥಿಗಳಾದ ಅರುಣ್ ಕುಮಾರ್, ಶಶಿಧರ್, ದೀಕ್ಷಿತಾ, ತನುಶ್ರೀ, ಸವಿತಾ ರೈ, ಅನುಷಾ, ಸೌಜನ್ಯ ಹಾಗೂ ವಿನಿತಾ ಅನುಭವಗಳನ್ನು ಹಂಚಿಕೊಂಡರು. ವೇದಿಕೆಯಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವ್ಯ ಪಿ.ಆರ್. ನಿಡ್ಪಳ್ಳಿ ಹಾಗೂ ತೃತೀಯ ಪತ್ರಿಕೋದ್ಯಮ ವಿದ್ಯಾರ್ಥಿನಿ ಅನಘಾ ಶಿವರಾಮ್ ಉಪಸ್ಥಿತರಿದ್ದರು.
ತೃತೀಯ ವರ್ಷದ ವಿದ್ಯಾರ್ಥಿನಿ ಜಯಶ್ರೀ ಸ್ವಾಗತಿಸಿ, ರಾಮ್ ಕಿಶನ್ ವಂದಿಸಿದರು. ಅರುಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.