ಸವಣೂರು :ಕಠಿಣ ಪರಿಶ್ರಮಕ್ಕೆ ಎಂದೂ ಸೋಲಾಗದು,ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ.ಶೈಕ್ಷಣಿಕವಾಗಿ ಪುತ್ತೂರು ತಾಲೂಕು ರಾಜ್ಯಕ್ಕೆ ಮೊದಲಿಗರಾಗಬೇಕು.ಶೈಕ್ಷಣಿಕ ಕೇಂದ್ರದ ಬೆಳವಣಿಗೆಯಲ್ಲಿ ಶಾಲಾಭಿವೃದ್ದಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ,ದಾನಿಗಳ,ಊರವರ ಶ್ರಮವೂ ಪ್ರಮುಖವಾಗಿದೆ. ಗುರು- ಶಿಷ್ಯರನ್ನು ಸಮ್ಮಾನಿಸಿದ್ದು ಉತ್ತಮ ಕೆಲಸ ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳೂ 100 ಫಲಿತಾಂಶ ದೊಂದಿಗೆ ಹೆಚ್ಚು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಬೇಕು ಶಾಲೆಯ ಎಲ್ಲಾ ಸಮಸ್ಯೆಗಳಿಗೆ ನಾನು ಸ್ಪಂದಿಸುತ್ತೇನೆ ಶಾಲಾ ಶೈಕ್ಷಣಿಕ ಸಾಧನೆ ಅಭಿನಂದನೆ ಸಲ್ಲಿಸುವುದಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.
ಅವರು ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2018-19 ನೇ ಸಾಲಿನ ಎಸ್,ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ,ಶಾಲಾಭಿವೃದ್ದಿ ಸಮಿತಿ, ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿ.ಪಂ.ನ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಮಾತನಾಡಿ, ಮುಂದಿನ ದಿನಗಳಲ್ಲಿ ಶಾಲಾ ಆಟದ ಮೈದಾನ ವಿಸ್ತರಣೆ ,ಶಾಲೆಗೆ ರಂಗಮಂದಿರ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದರು.
ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷೆ ಗಿರಿಜಾ ಧನಂಜಯ ಪೂಜಾರಿ ,ದಾನಿ, ರೋಟರೀ ಕ್ಲಬ್ ಬೆಳ್ಳಾರೆ ಟೌನ್ ಇದರ ನಿರ್ದೇಶಕ ವೆಂಕಪ್ಪ ಗೌಡ ನಾರ್ಕೋಡು ಪೆರ್ಜಿ ,ಮಣಿಕ್ಕರ ಪ್ರೌಢಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಸುನಿಲ್ ರೈ ಪಾಲ್ತಾಡು. ನಿಕಟಪೂರ್ವ ಕಾರ್ಯಾಧ್ಯಕ್ಷ ಸಯ್ಯದ್ ಗಫೂರ್ ಸಾಹೇಬ್ ಪಾಲ್ತಾಡು , ,ಮಣಿಕ್ಕರ ಸ.ಹಿ.ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಇಬ್ರಾಹಿಂ, ಪ್ರಾಥಮಿಕ ಶಾಲಾ ಮುಖ್ಯಗುರು ವಿಶಾಲಾಕ್ಷಿ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯಸ್ಥ ಮಹಾಲಿಂಗೇಶ್ವರ ಸ್ವಾಗತಿಸಿ ,ದೈಹಿಕ ಶಿಕ್ಷಣ ಶಿಕ್ಷಕ ಕರುಣಾಕರ ಮಣಿಯಾಣಿ ವಂದಿಸಿದರು.ಶಿಕ್ಷಕಿ ಗೀತಾ ಬಿ.ವಿ ಕಾರ್ಯಕ್ರಮ ನಿರೂಪಿಸಿದರು.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…