ಸುಳ್ಯ: ಕೃಷಿ ಉತ್ಪನ್ನಗಳನ್ನು ಬೆಳೆಯುವ ರೈತ ಲಾಭ ಗಳಿಸುವ ಉದ್ದೇಶದಿಂದ ಹೆಚ್ಚು ಇಳುವರಿ ಪಡೆಯುವುದಕ್ಕಾಗಿ ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆ ಮಾಡುತ್ತಿದ್ದಾರೆ. ಆರ್ಥಿಕವಾಗಿ ಸದೃಢನಾಗಬೇಕು ಎನ್ನುವ ಮನುಷ್ಯನ ಅತಿಯಾದ ಆಸೆಯಿಂದ ರಾಸಾಯನಿಕಗಳ ಬಳಕೆ ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು.
ಅವರು ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಸುಳ್ಯ ಇದರ ಆಶ್ರಯದಲ್ಲಿ ಮಣ್ಣು ಆರೋಗ್ಯ ಚೀಟಿ ಕಾರ್ಯಕ್ರಮದಡಿ ಮಾದರಿ ಗ್ರಾಮ ಉಬರಡ್ಕ ಮಿತ್ತೂರುನ ಶ್ರೀ ನರಸಿಂಹ ಶಾಸ್ತ್ರವು ದೇವಸ್ಥಾನದ ಸಭಾಭವನದಲ್ಲಿ ನಡೆದ ರೈತರ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕೃಷಿಗೆ ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಮಣ್ಣಿನ ಸತ್ವ ಕಳೆದುಕೊಂಡಿದೆ. ಮನುಷ್ಯನಲ್ಲಿ ರೋಗ ನಿರೋಧಕ ಶಕ್ತಿ ಕಳೆದುಕೊಂಡ ರೀತಿಯಲ್ಲಿ ಮಣ್ಣು ಕೂಡ ರೋಗ ನಿರೋಧಕ ಶಕ್ತಿ ಕಡಿಮೆ ಆಗಿ ವಿಷಯುಕ್ತವಾಗುತ್ತಿದೆ. ಇದಕ್ಕೆ ಮಣ್ಣಿನ ಪರೀಕ್ಷೆ ನಡೆಯಬೇಕು ಇದಕ್ಕೆಲ್ಲ ಅಧಿಕಾರಕ್ಕೆ ಬರುವಂತಹ ಸರಕಾರಗಳಿಂದಾಗುತ್ತಿದೆ. ಅಧಿಕಾರಕ್ಕೆ ಬರುವ ರಾಜಕೀಯ ಪಕ್ಷಗಳಿಗೆ ಸ್ಪಷ್ಟವಾದ ಉದ್ದೇಶಗಳಿಲ್ಲದೇ ಕೃಷಿ ವಲಯ ಸೇರಿದಂತೆ ಎಲ್ಲಾ ವಲಯಗಳು ಸಮಸ್ಯೆ ಎದುರಿಸುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗುತ್ತಾರೆ. ಕೇವಲ ಕಾರ್ಯಕ್ರಮ ಆಯೋಜನೆ ಮಾಡಿದರೆ ಮಣ್ಣು ಪರೀಕ್ಷೆಯ ಮಾದರಿ ಗ್ರಾಮ ಆಗುವುದಿಲ್ಲ. ಪ್ರತಿ ಮನೆ ಮನೆಯಲ್ಲಿ ಮಣ್ಣು ಪರೀಕ್ಷೆ ನಡೆಯಬೇಕು. ಇದಕ್ಕಾಗಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಆಗಿ ಜನರಿಗೆ ತಲುಪಬೇಕು. ಆದರೆ ಇಲಾಖೆಗಳಲ್ಲಿ ಕೆಳಹಂತದ ಹುದ್ದೆಗಳ ಕೊರತೆಯಿಂದ ಶೇ. 100 ರಷ್ಟು ಅನುಷ್ಠಾನ ಆಗುತ್ತಿಲ್ಲ ಎಂದು ಹೇಳಿದರು.
ಮುಖ್ಯ ಅತಿಥಿ ಜಿಲ್ಲಾ ಪಂಚಾಯಿತಿ ಸದಸ್ಯ ಹರೀಶ್ ಕಂಜಿಪಿಲಿ ಮಾತನಾಡಿ ಹಿಂದಿನ ಕಾಲದಲ್ಲಿ ಕೃಷಿಗೆ ನೈರ್ಸಗಿಕ ಗೊಬ್ಬರಗಳ ಬಳಕೆಯಿಂದ ಭೂಮಿ ಸತ್ವಯುತವಾಗಿತ್ತು. ಆದರೆ ರಾಸಾಯನಿಕ ಗೊಬ್ಬರಗಳಿಗೆ ದಾಸರಾದ ಬಳಿಕ ಮಣ್ಣು ತನ್ನ ಸತ್ವ ಕಳೆದುಕೊಂಡಿತ್ತು. ಈ ಕಾರಣಕ್ಕಾಗಿ ನಾವು ಮಣ್ಣಿನ ಫಲವತ್ತಾತೆಯನ್ನು ತಿಳಿಯುವ ಉದ್ದೇಶದಿಂದ ಮಣ್ಣಿನ ಪರೀಕ್ಷೆ ಅನಿವಾರ್ಯ. ರೈತರು ಕೂಡ ಈ ಬಗ್ಗೆ ಬಗ್ಗೆ ಕಾರ್ಯಪ್ರವೃತ್ತರಾಗಿ ನೈರ್ಸಗಿಕ ಗೊಬ್ಬರಗಳ ಬಳಕೆಯ ಮೂಲಕ ಹೆಚ್ಚು ಇಳುವರಿ ಪಡೆಯುವಂತ ರೈತರು ಗಮನ ಕೇಂದ್ರಿಕರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅದ್ಯಕ್ಷತೆಯನ್ನು ಉಬರಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರಿಪ್ರಸಾದ್ ಪಾನತ್ತಿಲ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ಪಂಚಾಯತ್ ಸದಸ್ಯೆ ವಿದ್ಯಾಲಕ್ಷ್ಮೀ, ತೋಟಗಾರಿಕೆ ಇಲಾಖೆಯ ಪ್ರಭಾರ ಹಿರಿಯ ಸಹಾಯಕ ನಿರ್ದೇಶಕಿ ಸುಹಾನ, ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕ ಡಾ. ನವೀನ್, ಪುತ್ತೂರು ಉಪವಿಭಾಗದ ಉಪ ಕೃಷಿ ನಿರ್ದೇಶಕ ಡಾ.ಶಿವಶಂಕರ್ ದಾನೆಗೊಂಡರ್, ಸಹಾಯಕ ಕೃಷಿ ನಿರ್ದೇಶಕ ನಂದನ್, ಕೃಷಿ ಅಧಿಕಾರಿ ಮೋಹನ್ ನಂಗಾರು. ನರಸಿಂಹ ಶಾಸ್ತ್ರವು ದೇವಾಲಯದ ಆಡಳಿತ ಮೋಕ್ತೇಸರ ಜತ್ತಪ್ಪ ರೈ, ಉಬರಡ್ಕ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗೌಡ, ಉಬರಡ್ಕ ಮಿತ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ವಾಣಿ.ಜೆ.ಶೆಟ್ಟಿ, ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬೆಳೆ ಪ್ರಶಸ್ತಿ ವಿಜೇತ ರೈತರಾದ ಕುಶಾಲಪ್ಪ ಆಲೆಟ್ಟಿ, ಚಂದ್ರಶೇಖರ್ ರೈ ಮತ್ತು ಸವಿತಾ ಪರಮೇಶ್ವರ ಅವರನ್ನು ಸನ್ಮಾನಿಸಲಾಯಿತು. ಮಣ್ಣು ಮಾದರಿ ಸಂಗ್ರಹಣೆ, ಮಾದರಿ ವಿಶ್ಲೇಷಣೆಯ ಆಧಾರದ ಮೇಲೆ ಸಮಗ್ರ ಪೋಷಕಾಂಶಗಳ ನಿರ್ವಹಣೆ, ಇಲಾಖಾ ಕಾರ್ಯಕ್ರಮಗಳ ಹಾಗೂ ಸೌಲಭ್ಯಗಳ ಕುರಿತು ಇಲಾಖಾದಿಕಾರಿಗಳಿಂದ ಮಾಹಿತಿ ನೀಡಲಾಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…