ವಿಟ್ಲ: ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭ ಮಣ್ಣು ಕುಸಿದು 3 ಮಂದಿ ಮೃತಪಟ್ಟ ಘಟನೆ ವಿಟ್ಲ ಬಳಿಯ ಒಡಿಯೂರಿನಲ್ಲಿ ನಡೆದಿದೆ. ಶನಿವಾರ ಜೆಸಿಬಿ ಮೂಲಕ ಕೆಲಸ ನಡೆದಿತ್ತು. ಅದಾದ ಬಳಿಕ ಸಮತಟ್ಟು ಮಾಡುವ ವೇಳೆ ದಿಬ್ಬ ಕುಸಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಟ್ಟಡ ನಿರ್ಮಾಣಕ್ಕೆ ಪಿಲ್ಲರ್ ಗಾಗಿ ಜೆಸಿಬಿ ಮೂಲಕ ಪಿಲ್ಲರ್ ಗೆ ಅಡಿಪಾಯ ತೆಗೆಯಲಾಗಿತ್ತು. ಬಳಿಕ ಪಿಲ್ಲರ್ ಕೆಳಭಾಗದ 3 ಮಂದಿ ಸಮತಟ್ಟು ಕೆಲಸ ನಡೆಸುತ್ತಿದ್ದಾಗ ಸುಮಾರು 70 ಅಡಿ ಎತ್ತರದ ದಿಬ್ಬ ಕುಸಿತವಾಗಿ ಮಣ್ಣಿನೊಳಗೆ ಸಿಲುಕಿಕೊಂಡ ಕಾರ್ಮಿಕರು ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಸ್ಥಳೀಯರಾದ ಬಾಳಪ್ಪ, ರಮೇಶ ಹಾಗೂ ಪ್ರಕಾಶ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ , ವಿಟ್ಲ ಕಂದಾಯ ನಿರೀಕ್ಷಕರು, ಬಂಟ್ವಾಳ ಪೋಲಿಸ್ ವೃತ್ತ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…