ಸುಳ್ಯ: ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ತರಬೇತಿ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗಿರಿಧರ ಗೌಡ ಕೆ ಇವರು ವಹಿಸಿದ್ದರು. ಪರಿಷ್ಕರಣಾ ಸಮಿತಿ ತರಬೇತುದಾರರಾದ ಸತೀಶ್‍ಕೊೈಂಗಾಜೆ, ದೈಹಿಕ ಶಿಕ್ಷಣ ನಿರ್ದೇಶಕರು ಸರಕಾರಿ ಪದವಿ ಕಾಲೇಜು ಸುಳ್ಯ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿಯನ್ನು ನೀಡಿದರು. ಸಹ ತರಬೇತುದಾರರಾಗಿ ಕೌಶಿಕ್ ಸಿಬ್ಬಂದಿ ತಾಲೂಕು ಕಚೇರಿ ಸುಳ್ಯ ಇವರು ಸಹಕರಿಸಿದರು.
ಕಾಲೇಜಿನ ವಿದ್ಯಾರ್ಥಿಕ್ಷೇಮ ಪಾಲನಾ ಅಧಿಕಾರಿಗಳಾದ ಡಾ. ಪೂವಪ್ಪ ಕಣಿಯೂರು ಮತ್ತು ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತರಬೇತಿಯಲ್ಲಿ ಪಾಲ್ಗೊಂಡು, ಸದುಪಯೋಗವನ್ನು ಪಡೆದುಕೊಂಡರು.
ಕಾರ್ಯಕ್ರಮದ ಸಂಯೋಜಕಿ ಮಮತ ಕೆ. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಸ್ವಾಗತಿಸಿ, ಜಾನಕಿ ಟಿ ರಾಜ್ಯಶಾಸ್ತ್ರ ವಿಭಾಗ ಉಪನ್ಯಾಸಕಿ ವಂದಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…