ಮತ್ತೆ ಸಾಬೀತಾದ ಸುಳ್ಯ ಶಾಸಕ ಎಸ್.ಅಂಗಾರ ಅವರ ಪಕ್ಷ ನಿಷ್ಠೆ

August 27, 2019
2:13 PM

ಸುಳ್ಯ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಪದಗ್ರಹ ಮಾಡುವ ಸಮಾರಂಭ. ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ಶಾಸಕರ ಸಹಿತ ಬಿಜೆಪಿ ಕಾರ್ಯಕರ್ತರು ತೆರಳಿದ್ದಾರೆ. ಈ ಬಾರಿಯೂ ಮತ್ತೆ ಶಾಸಕ ಅಂಗಾರ ಅವರು ಪಕ್ಷ ನಿಷ್ಠೆ ಮೆರೆದಿದ್ದಾರೆ. ಬೆಂಗಳೂರಿನಲ್ಲಿ  ನಡೆದ ಕಾರ್ಯಕ್ರಮದಲ್ಲಿ  ಭಾಗವಹಿಸಿದ್ದಾರೆ. ಸುಳ್ಯದ ಹಲವು ಪ್ರಮುಖರು ಭಾಗವಹಿಸಿದ್ದಾರೆ.

Advertisement

26 ವರ್ಷಗಳಿಂದ ಸುಳ್ಯದ ಶಾಸಕರಾಗಿರುವ ಹಿರಿಯರಾದ ಅಂಗಾರ ಅವರಿಗೆ ಈ ಬಾರಿಯ ಸಚಿವ ಸ್ಥಾನ ಲಭ್ಯವಾಗುತ್ತದೆ ಎಂದು  ಬಿಜೆಪಿಯ ಕಾರ್ಯಕರ್ತರು ನಿರೀಕ್ಷೆಯಲ್ಲಿದ್ದರು. ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಲಭ್ಯವಾಗಿಲ್ಲ. ಹೀಗಾಗಿ ಸಹಜವಾಗಿಯೇ ಪಕ್ಷದ ಕಾರ್ಯಕರ್ತರಿಗೆ ಬೇಸರವಾಗಿತ್ತು. ಈ ಸಂದರ್ಭ ಶಾಸಕ ಅಂಗಾರ ಅವರೂ ಬೇಸರ ವ್ಯಕ್ತಪಡಿಸಿದ್ದರು. ಆದರೆ ಪಕ್ಷದ ಜೊತೆ ಯಾವುದೇ ಮುನಿಸಿಲ್ಲ, ಗಮನಿಸಿ ಸಚಿವ ಸ್ಥಾನ ಕೊಡಬೇಕಾಗಿತ್ತು ಎಂದು ಹೇಳಿದ್ದರು. ಆದರೆ ಮಂಡಲದ ಬಿಜೆಪಿ ಪದಾಧಿಕಾರಿಗಳು, ಕೆಲವು ಗ್ರಾಪಂ ಸದಸ್ಯರು ಸೇರಿದಂತೆ ಸಾಮೂಹಿಕ ರಾಜೀನಾಮೆ ನೀಡಿದ್ದರು, ಪಕ್ಷದ ಎಲ್ಲಾ ಚಟುವಟಿಕೆಗಳಿಗೆ ಅಸಹಕಾರ ನೀಡುವುದಾಗಿ ಹೇಳಿದ್ದರು. 300 ಕ್ಕೂ ಅಧಿಕ ಮಂದಿ ರಾಜೀನಾಮೆ ನೀಡಿದ್ದರು. ಆದರೆ ಬೆಂಗಳೂರಿನಲ್ಲಿ  ನಡೆದ ಕಾರ್ಯಕ್ರಮದಲ್ಲಿ  ಬಹುತೇಕ ಮಂದಿ ಹಾಜರಾಗಿದ್ದರು ಕೂಡಾ.

ಇದರಲ್ಲಿ ಶಾಸಕ ಅಂಗಾರ ಅವರ ಪಕ್ಷ ನಿಷ್ಠೆ ಈಗ ಮತ್ತೆ ಗಮನ ಸೆಳೆದಿದೆ. ಪಕ್ಷದ ಅಧ್ಯಕ್ಷರು ಮಂಗಳೂರಿನ ಸಂಸದ ನಳಿನ್ ಕುಮಾರ ಕಟೀಲು ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರುಗಳಾದ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಅವರ ಜೊತೆ ಕುಳಿತುಕೊಂಡು ಕಾರ್ಯಕ್ರಮದಲ್ಲಿ ಸುಳ್ಯ ಕ್ಷೇತ್ರಕ್ಕೆ ಲೋಪವಾಗದಂತೆ ಎಚ್ಚರಿಕೆ ವಹಿಸಿದರು. ಅಂಗಾರ ಅವರು ಅಸಹಕಾರದ ಬಗ್ಗೆ ಯಾವುದೇ ಚಕಾರ ಎತ್ತಲಿಲ್ಲ. ಬೇಸರವಾಗಿದೆ ಎಂದಷ್ಟೇ ಹೇಳಿದ್ದರು. ಹೀಗಾಗಿ ಮತ್ತೆ ಅಂಗಾರ  ಅವರ ಪಕ್ಷ ನಿಷ್ಠೆ ಸಾಬೀತಾಗಿದೆ. ಸಜ್ಜನ ರಾಜಕಾರಣಿ ಎಂಬುದೂ ಮತ್ತೆ ಸಾಬೀತು ಮಾಡಿದ್ದಾರೆ.

ಪಕ್ಷದ ಕಾರಣಕ್ಕೆ ಅಸಹಕಾರ ಎಂದು ಗ್ರಾಮ ಪಂಚಾಯತ್ ಸದಸ್ಯರುಗಳು, ಜನಪ್ರತಿನಿಧಿಗಳು ರಾಜೀನಾಮೆ, ಅಸಹಕಾರ ನೀಡುವ ಮೂಲಕ ಜನಸಾಮಾನ್ಯರಿಗೇ ತೊಂದರೆಯಾಗುತ್ತಿರುವುದು  ಸಾಮಾನ್ಯ ಸಂಗತಿ. ಆದರೆ ಅಂಗಾರ ಅವರು ಅಂತಹ ಯಾವುದೇ ಕೆಲಸಕ್ಕೆ ಮುಂದಾಗದೆ ಕ್ಷೇತ್ರದಲ್ಲಿ ಓಡಾಟ ಮುಂದುವರಿಸಿದ್ದಾರೆ.

 

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …
May 14, 2025
9:43 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ
May 14, 2025
11:31 AM
by: ಸಾಯಿಶೇಖರ್ ಕರಿಕಳ
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ
May 14, 2025
11:20 AM
by: The Rural Mirror ಸುದ್ದಿಜಾಲ
ಜೂ.30 ರೊಳಗೆ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಲಾಗವುದು | ಕಂದಾಯ ಸಚಿವ ಕೃಷ್ಣಬೈರೇಗೌಡ
May 14, 2025
11:15 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group