ಸುಳ್ಯ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಪದಗ್ರಹ ಮಾಡುವ ಸಮಾರಂಭ. ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ಶಾಸಕರ ಸಹಿತ ಬಿಜೆಪಿ ಕಾರ್ಯಕರ್ತರು ತೆರಳಿದ್ದಾರೆ. ಈ ಬಾರಿಯೂ ಮತ್ತೆ ಶಾಸಕ ಅಂಗಾರ ಅವರು ಪಕ್ಷ ನಿಷ್ಠೆ ಮೆರೆದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಸುಳ್ಯದ ಹಲವು ಪ್ರಮುಖರು ಭಾಗವಹಿಸಿದ್ದಾರೆ.
26 ವರ್ಷಗಳಿಂದ ಸುಳ್ಯದ ಶಾಸಕರಾಗಿರುವ ಹಿರಿಯರಾದ ಅಂಗಾರ ಅವರಿಗೆ ಈ ಬಾರಿಯ ಸಚಿವ ಸ್ಥಾನ ಲಭ್ಯವಾಗುತ್ತದೆ ಎಂದು ಬಿಜೆಪಿಯ ಕಾರ್ಯಕರ್ತರು ನಿರೀಕ್ಷೆಯಲ್ಲಿದ್ದರು. ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಲಭ್ಯವಾಗಿಲ್ಲ. ಹೀಗಾಗಿ ಸಹಜವಾಗಿಯೇ ಪಕ್ಷದ ಕಾರ್ಯಕರ್ತರಿಗೆ ಬೇಸರವಾಗಿತ್ತು. ಈ ಸಂದರ್ಭ ಶಾಸಕ ಅಂಗಾರ ಅವರೂ ಬೇಸರ ವ್ಯಕ್ತಪಡಿಸಿದ್ದರು. ಆದರೆ ಪಕ್ಷದ ಜೊತೆ ಯಾವುದೇ ಮುನಿಸಿಲ್ಲ, ಗಮನಿಸಿ ಸಚಿವ ಸ್ಥಾನ ಕೊಡಬೇಕಾಗಿತ್ತು ಎಂದು ಹೇಳಿದ್ದರು. ಆದರೆ ಮಂಡಲದ ಬಿಜೆಪಿ ಪದಾಧಿಕಾರಿಗಳು, ಕೆಲವು ಗ್ರಾಪಂ ಸದಸ್ಯರು ಸೇರಿದಂತೆ ಸಾಮೂಹಿಕ ರಾಜೀನಾಮೆ ನೀಡಿದ್ದರು, ಪಕ್ಷದ ಎಲ್ಲಾ ಚಟುವಟಿಕೆಗಳಿಗೆ ಅಸಹಕಾರ ನೀಡುವುದಾಗಿ ಹೇಳಿದ್ದರು. 300 ಕ್ಕೂ ಅಧಿಕ ಮಂದಿ ರಾಜೀನಾಮೆ ನೀಡಿದ್ದರು. ಆದರೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುತೇಕ ಮಂದಿ ಹಾಜರಾಗಿದ್ದರು ಕೂಡಾ.
ಇದರಲ್ಲಿ ಶಾಸಕ ಅಂಗಾರ ಅವರ ಪಕ್ಷ ನಿಷ್ಠೆ ಈಗ ಮತ್ತೆ ಗಮನ ಸೆಳೆದಿದೆ. ಪಕ್ಷದ ಅಧ್ಯಕ್ಷರು ಮಂಗಳೂರಿನ ಸಂಸದ ನಳಿನ್ ಕುಮಾರ ಕಟೀಲು ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರುಗಳಾದ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಅವರ ಜೊತೆ ಕುಳಿತುಕೊಂಡು ಕಾರ್ಯಕ್ರಮದಲ್ಲಿ ಸುಳ್ಯ ಕ್ಷೇತ್ರಕ್ಕೆ ಲೋಪವಾಗದಂತೆ ಎಚ್ಚರಿಕೆ ವಹಿಸಿದರು. ಅಂಗಾರ ಅವರು ಅಸಹಕಾರದ ಬಗ್ಗೆ ಯಾವುದೇ ಚಕಾರ ಎತ್ತಲಿಲ್ಲ. ಬೇಸರವಾಗಿದೆ ಎಂದಷ್ಟೇ ಹೇಳಿದ್ದರು. ಹೀಗಾಗಿ ಮತ್ತೆ ಅಂಗಾರ ಅವರ ಪಕ್ಷ ನಿಷ್ಠೆ ಸಾಬೀತಾಗಿದೆ. ಸಜ್ಜನ ರಾಜಕಾರಣಿ ಎಂಬುದೂ ಮತ್ತೆ ಸಾಬೀತು ಮಾಡಿದ್ದಾರೆ.
ಪಕ್ಷದ ಕಾರಣಕ್ಕೆ ಅಸಹಕಾರ ಎಂದು ಗ್ರಾಮ ಪಂಚಾಯತ್ ಸದಸ್ಯರುಗಳು, ಜನಪ್ರತಿನಿಧಿಗಳು ರಾಜೀನಾಮೆ, ಅಸಹಕಾರ ನೀಡುವ ಮೂಲಕ ಜನಸಾಮಾನ್ಯರಿಗೇ ತೊಂದರೆಯಾಗುತ್ತಿರುವುದು ಸಾಮಾನ್ಯ ಸಂಗತಿ. ಆದರೆ ಅಂಗಾರ ಅವರು ಅಂತಹ ಯಾವುದೇ ಕೆಲಸಕ್ಕೆ ಮುಂದಾಗದೆ ಕ್ಷೇತ್ರದಲ್ಲಿ ಓಡಾಟ ಮುಂದುವರಿಸಿದ್ದಾರೆ.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…