ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿಯ ಸಹಯೋಗದಲ್ಲಿ ಜು.22ರಿಂದ ಜು.29ರ ತನಕ ಮದ್ಯವರ್ಜನ ಶಿಬಿರ ಬೆಳ್ಳಾರೆ ಶ್ರೀ ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದ್ದು ಇದರ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.
1377ನೇ ಮದ್ಯವರ್ಜನ ಶಿಬಿರ ಇದಾಗಿದ್ದು, ಸಮಿತಿಯ ಅಧ್ಯಕ್ಷರಾಗಿ ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಕಳಂಜ ಎನ್. ವಿಶ್ವನಾಥ ರೈಯವರನ್ನು ಆಯ್ಕೆ ಮಾಡಲಾಯಿತು. ಏಳು ದಿನಗಳ ಕಾಲ ನಡೆಯುವ ಶಿಬಿರದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರಿಗೆ, ಹಲವು ಮುಖಂಡರಿಗೆ ಹಾಗು ಊರಿನ ಗೌರವಾನ್ವಿತರಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್, ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್. ಮನ್ಮಥ, ಮುಗುಪ್ಪು ಕೂಸಪ್ಪ ಗೌಡ, ಬೆಳ್ಳಾರೆ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರು, ತಾಲೂಕು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಊರವರು ಉಪಸ್ಥಿತರಿದ್ದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…