Advertisement
The Rural Mirror ಕಾಳಜಿ

ಮನೆ ಮನೆಯಲ್ಲೂ ಇಂಗುಗುಂಡಿ “ಜಲಾಮೃತ” ಅಭಿಯಾನಕ್ಕೆ ಚಾಲನೆ

Share

ಸುಳ್ಯ: ಜಲಸಂರಕ್ಷಣೆಗಾಗಿ ಮನೆ ಮನೆಯಲ್ಲಿ ಇಂಗು ಗುಂಡಿ ಅಭಿಯಾನ `ಜಲಾಮೃತ ಯೋಜನೆಯ’ ಉದ್ಘಾಟನಾ ಸಮಾರಂಭ ಸುಳ್ಯದ ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ನಡೆಯಿತು.

Advertisement
Advertisement

ಸುಳ್ಯ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಮೂಲಕ ಪ್ರತಿ ಮನೆಯಲ್ಲಿ ಒಂದು ಇಂಗು ಗುಂಡಿಯನ್ನು ಮಕ್ಕಳೇ ನಿರ್ಮಿಸಬೇಕು ಹಾಗೂ ಮಕ್ಕಳಿಗೆ ನೀರಿಂಗಿಸುವಿಕೆಯ ಮಹತ್ವವನ್ನು ತಿಳಿಸಬೇಕು ಎಂಬ ದೃಷ್ಠಿಯಿಂದ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗುತಿದೆ. ಅಭಿಯಾನದ ಬಗ್ಗೆ ಮಾತನಾಡಿದ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ತಮ್ಮ ಮನೆಗಳ ಹಿತ್ತಲಿನಲ್ಲಿ ಎರಡು ಅಡಿ ಉದ್ದ, ಅಗಲ ಮತ್ತು ಆಳದ ಇಂಗು ಗುಂಡಿಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಮಾಡುವಂತೆ ಮಾಹಿತಿ ನೀಡಿದರು. ಇಂದು ಮಳೆಯು ತೀವ್ರ ಗತಿಯಲ್ಲಿ ಕಡಿಮೆಯಾಗುತಿದೆ. ಮುಂದಿನ ದಿನಗಳಲ್ಲಿ ಮನುಷ್ಯನ ಬದುಕು ಹಸನಾಗಲು ಬರುವ ಮಳೆಯ ನೀರನ್ನು ಉಳಿಸಿಕೊಳ್ಳಬೇಕಾಗಿದೆ. ಅದಕ್ಕಿರುವ ಸರಳ ಉಪಾಯ ಇಂಗು ಗುಂಡಿಗಳು. ಇಂಗು ಗುಂಡಿಗಳ ಮೂಲಕ ಸಾಧ್ಯವಾದಷ್ಟು ನೀರನ್ನು ಭೂಮಿಗೆ ಉಣಿಸಬೇಕಾಗಿದೆ. ಮಕ್ಕಳ ಮೂಲಕ ಪ್ರತಿ ಮನೆಯಲ್ಲಿಯೂ ಇಂಗುಗುಂಡಿಗಳು ನಿರ್ಮಾಣವಾಗಬೇಕು ಎಂದರು.

Advertisement

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್.ಪಿ. ಮಾತನಾಡಿ ಮಕ್ಕಳು ಇಂತಹ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಜಲಸಂರಕ್ಷಣೆಯ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು. ಶಾಲಾಭಿವೃದ್ಧಿ ಮಂಡಳಿ ಸದಸ್ಯ ಆರ್.ಕೆ.ಮಹಮ್ಮದ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ನಳಿನಿ ನೀರಿಂಗಿಸುವಿಕೆಯ ಮಹತ್ವವನ್ನು ವಿವರಿಸಿದರು.

ಸ್ನೇಹ ಶಾಲೆಯ ಮಾದರಿ:
ಸ್ನೇಹ ಶಾಲೆಯಲ್ಲಿ ಈಗಾಗಲೇ ಇಂಗು ಗುಂಡಿಗಳನ್ನು ನಿರ್ಮಾಣ ಮಾಡುವ ಮೂಲಕ ಮಾದರಿಯನ್ನು ಒದಗಿಸಿದೆ. ಶಾಲೆಯ ಐದನೆಯ ತರಗತಿಯಿಂದ 10ನೇ ತರಗತಿಯವರೆಗೆ 105 ವಿದ್ಯಾರ್ಥಿಗಳು ತಮ್ಮ ಮನೆಯ ಸಮೀಪ ಇಂಗು ಗುಂಡಿಯನ್ನು ನಿರ್ಮಿಸಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತಾನು ನಿರ್ಮಿಸಿದ ಇಂಗು ಗುಂಡಿಯ ಸಮೀಪ ನಿಂತು ಒಂದು ಭಾವಚಿತ್ರವನ್ನು ತೆಗೆದು ಶಾಲೆಗೆ ಕಳಿಸಲಾಗಿತ್ತು. ಪ್ರತಿಯೊಬ್ಬ ವಿದ್ಯಾರ್ಥಿಯ ಭಾವಚಿತ್ರ ಸೇರಿಸಿ ಬೃಹತ್ ಫ್ಲೆಕ್ಸ್ ನಿರ್ಮಿಸಿ ಶಾಲಾ ಆವರಣದಲ್ಲಿ ಅಳವಡಿಸಲಾಗಿದೆ. ಸ್ನೇಹ ಶಾಲೆಯ ಮಕ್ಕಳ ಮಳೆ ಕೊಯ್ಲು ಮಾದರಿಯ ಹಿನ್ನಲೆಯಲ್ಲಿ ತಾಲೂಕಿನ ಎಲ್ಲಾ ಶಾಲೆಗಳಿಗೂ ವಿಸ್ತರಿಸುವಂತೆ ಮಾಡುವ ಯೋಚನೆ ಡಾ.ಚಂದ್ರಶೇಖರ ದಾಮ್ಲೆ ಅವರದ್ದು. ಇದಕ್ಕೆ ಶಿಕ್ಷಣ ಇಲಾಖೆ ಸಾಥ್ ನೀಡಿ ಇದೀಗ ಅಭಿಯಾನ ಆರಂಭಿಸಲಾಗಿದೆ.

Advertisement

 

ಜಲಾಮೃತ ಯೋಜನೆಯ ಸಹಭಾಗಿತ್ವವನ್ನು ವಹಿಸಿರುವ ಸುಳ್ಯನ್ಯೂಸ್.ಕಾಂ ವತಿಯಿಂದ ಗಾಂಧೀನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‍ಗೆ ಗಿಡವನ್ನು ನೀಡಲಾಯಿತು. ಡಾ.ಚಂದ್ರಶೇಖರ ದಾಮ್ಲೆ ಅವರು ಶಾಲಾ ಮುಖ್ಯೋಪಾಧ್ಯಾಯಿನಿ ನಳಿನಿ ಅವರಿಗೆ ಗಿಡವನ್ನು ಹಸ್ತಾಂತರಿಸಿದರು. ಹಸಿರು ಲೋಕ ಸೃಷ್ಠಿ. ಶಾಲೆಗೊಂದು ಹಣ್ಣಿನ ಗಿಡ ಸಂಕಲ್ಪದೊಂದಿಗೆ ಜಲಾಮೃತ ಕಾರ್ಯಕ್ರಮ ನಡೆಯುವ ಪ್ರತಿ ಶಾಲೆಗೆ ಗಿಡ ನೀಡುವ ಯೋಜನೆ ಸುಳ್ಯನ್ಯೂಸ್.ಕಾಂ ತಂಡದ್ದು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

6 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

7 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

11 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

11 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

15 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago