ಮರ ಸಾಗಾಟದಿಂದ ರಸ್ತೆ ಹಾನಿ : ಲಾರಿಗೆ ಗ್ರಾಮಸ್ಥರ ತಡೆ

July 29, 2019
10:00 AM

ಬೆಳ್ಳಾರೆ: ಬೆಳ್ಳಾರೆ-ತಡಗಜೆ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರಗಳನ್ನು ಕಡಿದು ಲಾರಿಯಲ್ಲಿ ಸಾಗಾಟ ಮಾಡಿದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಲಾರಿಯನ್ನು ತಡೆದು ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ ಘಟನೆ ವರದಿಯಾಗಿದೆ.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಲಾರಿ ಮಾಲಕನಿಗೆ ಸೂಚನೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಿಯಾಲ ಸಂಪರ್ಕ ರಸ್ತೆಯ ಮೂಲಕ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರ ಕಡಿದು ಟಿಂಬರ್ ಲಾರಿಯಲ್ಲಿ ಸಾಗಿಸಲಾಗುತ್ತಿದೆ. ಇದರಿಂದ ರಸ್ತೆ ಹದಗೆಟ್ಟಿದೆ. ಈ ಕುರಿತು ಗ್ರಾಮಸ್ಥರು ಗಮನಕ್ಕೆ ತಂದಾಗ ರಸ್ತೆ ಸರಿಪಡಿಸಿಕೊಡುವುದಾಗಿ ಜಾಗದ ಮಾಲಕರು ಭರವಸೆ ನೀಡಿದ್ದರು. ಆದರೆ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದೆ ಎಂದು  ಲಾರಿ ತಡೆದು ಪಂಚಾಯತ್‍ಗೆ ಮಾಹಿತಿ ನೀಡಿದ್ದರು.

Advertisement
Advertisement

ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಹದಗೆಟ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರೊಂದಿಗೆ ಪಾದಾಚಾರಿಗಳಿಗೂ ತೊಂದರೆಯಾಗುತ್ತಿದೆ. ಡಾಮಾರು ರಸ್ತೆಯೇ ಕಿತ್ತುಹೋಗಿ ಕೆಸರು ತುಂಬಿಕೊಂಡಿದೆ. ತಕ್ಷಣ ರಸ್ತೆ ದುರಸ್ಥಿಗೊಳಿಸದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡುವುದಾಗಿ ಗ್ರಾಮಸ್ಥರು  ತಿಳಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror