ಬೆಳ್ಳಾರೆ: ಬೆಳ್ಳಾರೆ-ತಡಗಜೆ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರಗಳನ್ನು ಕಡಿದು ಲಾರಿಯಲ್ಲಿ ಸಾಗಾಟ ಮಾಡಿದ ಪರಿಣಾಮ ರಸ್ತೆ ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಲಾರಿಯನ್ನು ತಡೆದು ರಸ್ತೆ ಸರಿಪಡಿಸುವಂತೆ ಆಗ್ರಹಿಸಿದ ಘಟನೆ ವರದಿಯಾಗಿದೆ.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಲಾರಿ ಮಾಲಕನಿಗೆ ಸೂಚನೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕೊಡಿಯಾಲ ಸಂಪರ್ಕ ರಸ್ತೆಯ ಮೂಲಕ ಖಾಸಗಿ ವ್ಯಕ್ತಿಯೊಬ್ಬರ ಜಾಗದಿಂದ ಮರ ಕಡಿದು ಟಿಂಬರ್ ಲಾರಿಯಲ್ಲಿ ಸಾಗಿಸಲಾಗುತ್ತಿದೆ. ಇದರಿಂದ ರಸ್ತೆ ಹದಗೆಟ್ಟಿದೆ. ಈ ಕುರಿತು ಗ್ರಾಮಸ್ಥರು ಗಮನಕ್ಕೆ ತಂದಾಗ ರಸ್ತೆ ಸರಿಪಡಿಸಿಕೊಡುವುದಾಗಿ ಜಾಗದ ಮಾಲಕರು ಭರವಸೆ ನೀಡಿದ್ದರು. ಆದರೆ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದೆ ಎಂದು ಲಾರಿ ತಡೆದು ಪಂಚಾಯತ್‍ಗೆ ಮಾಹಿತಿ ನೀಡಿದ್ದರು.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ಹದಗೆಟ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಅದರೊಂದಿಗೆ ಪಾದಾಚಾರಿಗಳಿಗೂ ತೊಂದರೆಯಾಗುತ್ತಿದೆ. ಡಾಮಾರು ರಸ್ತೆಯೇ ಕಿತ್ತುಹೋಗಿ ಕೆಸರು ತುಂಬಿಕೊಂಡಿದೆ. ತಕ್ಷಣ ರಸ್ತೆ ದುರಸ್ಥಿಗೊಳಿಸದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.