ವಿಟ್ಲ: ಅಂತಾರಾಷ್ಟ್ರೀಯ ಒಕಿನವನ್ ಗೊಜು-ರ್ಯು ಕರಾಟೆ ಮಲೇಶಿಯಾ ಆಶ್ರಯದಲ್ಲಿ ಮಲೇಶಿಯಾದಲ್ಲಿ ಶನಿವಾರ ನಡೆದ 2019ನೇ ಸಾಲಿನ ಅಂತಾರಾಷ್ಟ್ರೀಯ ಕರಾಟೆ- ಡು ಓಪನ್ ಚಾಂಪಿಯನ್ ಶಿಪ್ ನಲ್ಲಿ ವಿಟ್ಲ ಬ್ರಾಣಪಾದೆಯ ಅಯ್ಯಪ್ಪ ಮೂಲ್ಯ ಹಾಗೂ ಶಾಲಿನಿ ದಂಪತಿಗಳ ಪುತ್ರಿ ನಿವೇದಿತಾ ಅವರು ‘Kata’ ಇವೆಂಟ್ ನಲ್ಲಿ ದ್ವಿತೀಯ ಹಾಗೂ ‘Kumite’ ಇವೆಂಟ್ ನಲ್ಲಿ ತೃತೀಯ ಮೆಡಲ್ ಪಡೆದುಕೊಂಡಿದ್ದಾರೆ.
ಈ ಹಿಂದೆಯೂ ಹಲವಾರು ಪ್ರಶಸ್ತಿ ಮೆಡಲ್ ಗಳನ್ನು ತಮ್ಮ ಮುಡಿಗೇರಿಸಿಕೊಂಡ ಇವರು ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದರು. ವಿಟ್ಲ ಪ್ರೀ ಯೂನಿವರ್ಸಿಟಿ ಕಾಲೇಜಿನಲ್ಲಿ ಪ್ರಥಮ ವರ್ಷ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ನಿವೇದಿತಾ ಅವರು ಈ ಹಿಂದೆ ನಡೆದ ಹಲವಾರು ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಚಿನ್ನ, ಬೆಳ್ಳಿ ಮೆಡಲ್ ಪಡೆದಿದ್ದರು.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…