ಮಳೆಗಾಲದ ಮುನ್ನೆಚ್ಚರಿಕೆ | ಜಿಲ್ಲಾ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ 1077

June 14, 2020
11:59 AM

ಮಂಗಳೂರು : ಗ್ರಾಮೀಣ ಮಟ್ಟದಲ್ಲಿ ಚರಂಡಿ ನೀರಿನ ವ್ಯವಸ್ಥೆ, ವಿದ್ಯುತ್ ವ್ಯತ್ಯಯ, ಅಪಾಯಕಾರಿ ಮರಗಳು ಬೀಳುವ ಸಂಭವ ಇದ್ದರೆ ಹಾಗೂ ಇತರ ಯಾವುದೇ ಸಮಸ್ಯೆಯಿದ್ದರೆ ಗ್ರಾಮೀಣ ಮಟ್ಟದಲ್ಲಿ ಪಿ.ಡಿ.ಓ. ಹಾಗೂ ನೋಡಲ್ ಅಧಿಕಾರಿಗಳು ಆ ಪ್ರದೇಶವನ್ನು ಗಮನಿಸಿ ತಕ್ಷಣ ಪರಿಹಾರ ಒದಗಿಸಬೇಕು ಎಂದು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

Advertisement

ಮಳೆಗಾಲದ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಕುರಿತಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಹೆಚ್ಚಾಗಿದೆ ಹಾಗಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಾಫಿಕ್ ಸಮಸ್ಯೆ, ಗುಡ್ಡ ಕುಸಿತ, ರಸ್ತೆ ಬದಿಗಳಲ್ಲಿ ಬೀಳುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು. ಜೊತೆಗೆ ಅಗತ್ಯ ಕ್ರಮಗಳನ್ನು ವಹಿಸಿಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದ್ದು ಅಧಿಕಾರಿಗಳು ಬೇಜವ್ದಾರಿತನ ವರ್ತಿಸಿದರೆ ಅಧಿಕಾರಿಗಳೆ ನೇರ ಹೊಣೆಯಾಗಿರುತ್ತಾರೆ ಮತ್ತು ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ಬೆಳ್ತಂಗಡಿ ತಾಲೂಕಿನಲ್ಲಿ ನೀರಿನ ಪ್ರವಾಹಕ್ಕೆ ಕಿಂಡಿ ಅಣೆಕಟ್ಟು ಸೇರಿದಂತೆ  ಸೇತುವೆಗಳಿಗೆ ಪಕ್ಕದ ಮರದ ದಿಮ್ಮಿಗಳು ಅಡ್ಡ ಬಿದ್ದು ಅಲ್ಲಿನ ಪ್ರದೇಶಗಳು ಜಲಾವೃತವಾಗುತ್ತದೆ, ಹಾಗಾಗಿ ಅರಣ್ಯ ಇಲಾಖೆ ಸೇತುವೆ ಪಕ್ಕದಲ್ಲಿರುವ ಮರವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಶಿರಾಡಿ, ಸಂಪಾಜೆ, ಚಾರ್ಮಾಡಿ ಈ ಭಾಗಗಳಲ್ಲಿ ಭೂಕುಸಿತ ಸಮಸ್ಯೆ ಸಂಭವಿಸುವುದರಿಂದ ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಂಡಿರಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಪಾಯದ ಸ್ಥಿತಿ ಎದುರಾದರೆ ಅಧಿಕಾರಿಗಳೇ ಜವಾಬ್ದಾರಿಯಾಗಿರುತ್ತಾರೆ ಎಂದು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದರು.

ಗ್ರಾಮ ಲೆಕ್ಕಾಧಿಕಾರಿ ಮತ್ತು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ, ಕಾರ್ಯದರ್ಶಿ ತಮ್ಮ ಕೇಂದ್ರಸ್ಥಾನದಲ್ಲಿದ್ದು ಅತಿವೃಷ್ಠಿ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ಕೊಡಬೇಕು. ಪ್ರವಾಹ ಸಂತೃಸ್ಥರಿಗೆ ಪರಿಹಾರ ಕೇಂದ್ರ ತೆರೆಯಲು ಸಮುದಾಯ ಭವನ, ದೊಡ್ಡ ಕಟ್ಟಡಗಳು ಇದ್ದಲ್ಲಿ ಅವುಗಳನ್ನು ಗುರುತಿಸಿಲಾಗಿದೆ. ಜಾನುವಾರುಗಳಿಗೆ ಗೋಶಾಲೆಗಳನ್ನು ತೆರೆಯಲು ಸೂಕ್ತ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದೆ. ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ನ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಕಡಲ ಕಿನಾರೆಗಳಲ್ಲಿ ನಾಮಫಲಕಗಳನ್ನು ಅಳವಡಿಸಿ ಗೃಹ ರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಕೃತಕ ನೆರೆಯಾಗುವ ಪ್ರದೇಶಗಳನ್ನು ಹಾಗೂ ನದಿ ತೀರದ ಹಳ್ಳಿಗಳಲ್ಲಿ ತುರ್ತು ಪರಿಸ್ಥಿತಿಗೆ ಸಂಬಂಧಪಟ್ಟಂತೆ ಜನರ ರಕ್ಷಣೆಗೆ ಬೋಟುಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ  ಸಭೆಗೆ ತಿಳಿಸಿದರು.

ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಯವರ ಪರಸ್ಪರ ಸಮನ್ವಯದಲ್ಲಿ ಕಾರ್ಯನಿರ್ವಹಿಸಬೇಕು.  ಅತಿವೃಷ್ಠಿ ಪ್ರವಾಹದ ಸಂದರ್ಭದಲ್ಲಿ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ರಾಜ್ಯ ವಿಪತ್ತು ನಿರ್ವಹಣಾ, ರಾಷ್ಟ್ರೀಯ ವಿಪತ್ತು ಪಡೆ, ಅರೆಸೇನಾ ಪಡೆ, ವಾಯುಪಡೆ ಹಾಗೂ ಗೃಹರಕ್ಷಕ ದಳ ಇಲಾಖೆ ಹಾಗೂ ರಕ್ಷಣಾ ಸಿಬ್ಬಂದಿಗಳ ಸಂಹಯೋಗದೊಂದಿಗೆ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

 ತುರ್ತು ಸಂದರ್ಭದಲ್ಲಿ ಜಿಲ್ಲಾ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ 1077/0824-2442590 ದಿನದ 24 ಗಂಟೆಗಳ ಕಾಲ ಕಾರ್ಯ ಚರಿಸುತ್ತದೆ. ಜಿಲ್ಲೆಯ ಉಪ ವಿಭಾಗಾಧಿಕಾರಿಗಳ ಹಾಗೂ ಎಲ್ಲಾ ತಹಶೀಲ್ದಾರರ ಕಾರ್ಯಾಲಯದಲ್ಲಿದಿನದ 24 ಗಂಟೆಗಳ ಕಾಲ ಸಿಬ್ಬಂದಿಯನ್ನು ನೇಮಿಸಲಾಗಿದೆ. ವಿಪತ್ತು ನಿರ್ವಹಣೆ ಕುರಿತಾಗಿ ನಿರ್ದೇಶನಗಳನ್ನು ನೀಡಲು ತುರ್ತಾಗಿ ಮಾಹಿತಿಯನ್ನು ಸಂಗ್ರಹಿಸಲು ಹಾಗೂ ಸಂಬಂಧಿಸಿದವರಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲು ಪ್ರತ್ಯೇಕವಾಗಿ ಜಿಲ್ಲಾ ಮಟ್ಟದ, ಉಪವಿಭಾಗ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನೊಳಗೊಂಡ ವಾಟ್ಸಾಪ್ ಗ್ರೂಪ್ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು.

ಸಭೆಯಲ್ಲಿ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಉಪಮೇಯರ್ ವೇದಾವತಿ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ
ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?
May 11, 2025
9:54 PM
by: The Rural Mirror ಸುದ್ದಿಜಾಲ
ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!
May 11, 2025
7:21 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group