ಮಡಿಕೇರಿ: ಪ್ರಕೃತಿ ವಿಕೋಪದ ಪರಿಹಾರ ಕಾಮಗಾರಿಗಳಿಗೆ ಬಿಡುಗಡೆ ಮಾಡಲಾದ 21 ಕೋಟಿ ರೂ. ಅನುದಾನವನ್ನು ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಶ್ರೀಕಂಠಯ್ಯ ಅವರು ಖಾಸಗಿ ಬ್ಯಾಂಕ್ ಖಾತೆಯಲ್ಲಿಟ್ಟಿರುವ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಆರೋಪ ಸಾಬೀತಾಗಿದೆ. ರಾಜ್ಯ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರುಗಳು ಇಂಜಿನಿಯರನ್ನು ಅಮಾನತುಗೊಳಿಸಲು ಆದೇಶ ಹೊರಡಿಸಿದ್ದಾರೆ.
ಶ್ರೀಕಂಠಯ್ಯ ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮೀಪ್ರಿಯ ಅವರು ಅ.9ರಂದು ಸರಕಾರದ ಮುಖ್ಯ ಕಾರ್ಯದರ್ಶಿಗೆ ಶಿಫಾರಸು ಮಾಡಿದ್ದರು. ಜಿ.ಪಂ ಪಂಚಾಯತ್ ರಾಜ್ ಇಲಾಖೆಯ ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗಳಿಗೆ ಸರಕಾರದಿಂದ ಒಟ್ಟು 28 ರೂ. ಬಿಡುಗಡೆಯಾಗಿತ್ತು. ಈ ಪೈಕಿ 21 ಕೋಟಿ ರೂ.ಗಳ ಚೆಕ್ ಅನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲಾ ಪಂಚಾಯಿತಿ ಪಂಚಾಯತ್ ರಾಜ್ ಇಲಾಖೆಗೆ ಹಸ್ತಾಂತರಿಸಿ, ಪ್ರತ್ಯೇಕ ಖಾತೆಯಲ್ಲಿ ಈ ಹಣವನ್ನು ಜಮೆ ಮಾಡುವಂತೆ ಸೂಚಿಸಿದ್ದರು. ಈ ಸಂದರ್ಭ ಇಇ ಶ್ರೀಕಂಠಯ್ಯ ಅವರು ಖೋಟಕ್ ಮಹೇಂದ್ರ ಬ್ಯಾಂಕ್‍ನಲ್ಲಿ ಖಾತೆ 21 ಕೋಟಿ ರೂ.ಗಳನ್ನು ಜಮೆ ಮಾಡಿದ್ದರು. ಈ ಹಣವನ್ನು ವಿವಿಧ ಕಾಮಗಾರಿಗಳಿಗೆ ಬಳಕೆ ಮಾಡಲಾಗಿದ್ದು, ಬ್ಯಾಂಕ್ ಖಾತೆಯಲ್ಲಿ 21 ಲಕ್ಷ ರೂ.ಗಳು ಮಾತ್ರ ಉಳಿದಿದೆ ಎಂದು ತಿಳಿದು ಬಂದಿದೆ.
ಖಾಸಗಿ ಬ್ಯಾಂಕ್‍ನಲ್ಲಿ ಖಾತೆ ತೆರೆದು ಅಲ್ಲಿ ಹಣ ಜಮೆ ಮಾಡುವುದಾದರೆ ಅದಕ್ಕೆ ಹಣಕಾಸು ಇಲಾಖೆ ಮತ್ತು ಜಿಲ್ಲಾಡಳಿತದ ಆಡಳಿತಾತ್ಮಕ ಅನುಮತಿ ಮತ್ತು ಅನುಮೋದನೆ ಪಡೆಯಬೇಕಿದೆ. ಆದರೆ ಇಇ ಶ್ರೀಕಂಠಯ್ಯ, ಜಿಲ್ಲಾಡಳಿತ ಮತ್ತು ಹಣಕಾಸು ಇಲಾಖೆಯ ಯಾವುದೇ ಅನುಮತಿ ಪಡೆಯದೇ ನಿಯಮವನ್ನು ಉಲ್ಲಂಘಿಸಿದ್ದರು. ಈ ಹಿಂದೆ ನಡೆದ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಈ ಕುರಿತು ಜಿ.ಪಂ. ಸದಸ್ಯ ಶಿವು ಮಾದಪ್ಪ ಅವರು ಈ ವಿಷಯ ಪ್ರಸ್ತಾಪಿಸಿ, ತನಿಖೆಗೆ ಒತ್ತಾಯಿಸಿದ್ದರು. ಇದಕ್ಕೆ ಪಕ್ಷಾತೀತ ಬೆಂಬಲ ವ್ಯಕ್ತವಾದ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಲಕ್ಷ್ಮೀಪ್ರಿಯ ಅವರು ಮುಖ್ಯ ಲೆಕ್ಕಾಧಿಕಾರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ತನಿಖೆಯ ಸಂದರ್ಭ ಅಧಿಕಾರಿ ಶ್ರೀಕಂಠಯ್ಯ, ಖಾಸಗಿ ವಲಯದ ಖೋಟಕ್ ಮಹೇಂದ್ರ ಬ್ಯಾಂಕಿನಲ್ಲಿ ಒಟ್ಟು 21 ಕೋಟಿ ರೂ.ಗಳನ್ನು ಜಮೆ ಮಾಡಿರುವುದು ಕಂಡು ಬಂದಿತ್ತು. ಮಾತ್ರವಲ್ಲದೇ, ಇದಕ್ಕೆ ಜಿಲ್ಲಾಡಳಿತ ಮತ್ತು ಹಣಕಾಸು ಇಲಾಖೆಯ ಅನುಮತಿ ಪಡೆಯದಿರುವುದು ಪತ್ತೆಯಾಗಿ ಸದಸ್ಯರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಿಯ ಪರಿಹಾರ ಹಣವನ್ನು ಖಾಸಗಿ ಬ್ಯಾಂಕ್‍ನಲ್ಲಿ ಜಮೆ ಮಾಡುವುದಾರೆ ಅದಕ್ಕೆ ಆಡಳಿತಾತ್ಮಕ ಅನುಮೋದನೆ ಪಡೆಯಬೇಕಿರುತ್ತದೆ. ಆದರೆ ಇಇ ಶ್ರೀಕಂಠಯ್ಯ ಅವರು ಈ ನಿಯಮ ಉಲ್ಲಂಘನೆ ಮಾಡಿರುವುದು ಕಂಡು ಬಂದಿದೆ. ಜಿಲ್ಲಾ ಪಂಚಾಯಿತಿ ಸಭೆಯಲ್ಲೂ ಚರ್ಚೆ ನಡೆದು ತನಿಖೆ ಮಾಡುವಂತೆ ಒತ್ತಾಯ ಕೇಳಿ ಬಂದಿತ್ತು. ತನಿಖೆಯಲ್ಲಿ ಅಧಿಕಾರಿ ತಪ್ಪೆಸಗಿರುವುದು ಪತ್ತೆಯಾಗಿದೆ. ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ವರದಿ ನೀಡಲಾಗಿದೆ. ಸರಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…