ಭಾರೀ ಮಳೆಯಿಂದ ತಾಲೂಕಿನ ವಿವಿಧ ರಸ್ತೆಗಳು ಹಾನಿಯಾಗಿದೆ. ಈಗಾಗಲೇ ಜಿಲ್ಲೆಗೆ ಮಳೆಹಾನಿ ಅನುದಾನ ಲಭ್ಯವಾಗಿದೆ. ಇದರಲ್ಲಿ ತಾಲೂಕಿನ ರಸ್ತೆಗಳ ಅಭಿವೃದ್ಧಿಗೂ ಆದ್ಯತೆ ಇರಲಿ ಎಂಬ ಆಶಯದೊಂದಿಗೆ……
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ರಾಜ್ಯ ಹೆದ್ದಾರಿ ರಸ್ತೆಗಳು, ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ ಸೇತುವೆಗಳು ಹಾನಿಗೊಂಡಿದೆ. ಹಾನಿಗೊಳಗಾದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆ, ರಾಜ್ಯ ಹೆದ್ದಾರಿ ಮತ್ತು ಸೇತುವೆ ದುರಸ್ತಿ ತುರ್ತಾಗಿ ಕೈಗೊಂಡು ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದು, ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಲೋಕೋಪಯೋಗಿ ಇಲಾಖೆಗೆ ಒಟ್ಟು 27.14 ಕೋಟಿ ರೂ. ಅನುಮೋದನೆ ದೊರಕಿರುತ್ತದೆ.
ದಕ್ಷಿಣ ಕನ್ನಡ ಲೋಕೋಪಯೋಗಿ ಇಲಾಖೆ ಮಂಗಳೂರು ವಿಭಾಗದ ಅಧೀನದಲ್ಲಿರುವ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಗಂಡಿ ಹಾಗೂ ಸುಳ್ಯ ಉಪವಿಭಾಗಗಳಿಗೆ ನೀಡಿರುವ ಅನುದಾನವನ್ನು ಪರಿಮಾಣಕ್ಕೆ ಅನುಗುಣವಾಗಿ ಮರುಹಂಚಿಕೆ ಮಾಡಿ ಕ್ರಿಯಾಯೋಜನೆ ತಯಾರಿಸಲಾಗಿರುತ್ತದೆ. ಲೋಕೋಪಯೋಗಿ ಮಂಗಳೂರು ವಿಭಾಗಕ್ಕೆ ರಾಜ್ಯಹೆದ್ದಾರಿ ರಸ್ತೆ ಹಾಗೂ ಸೇತುವೆ 71 ಕಾಮಗಾರಿಗಳಿಗೆ ರೂ 10.32 ಕೋಟಿ ಮತ್ತು ಜಿಲ್ಲಾ ಮುಖ್ಯ ರಸ್ತೆ ಹಾಗೂ ಸೇತುವೆ 127 ಕಾಮಗಾರಿಗಳಿಗೆ ರೂ 16.83 ಕೋಟಿಯಂತೆ ಒಟ್ಟು 198 ಕಾಮಗಾರಿಗಳಿಗೆ 27.14 ಕೋಟಿ ಕ್ರಿಯಾಯೋಜನೆ ತಯಾರಿಸಲಾಗಿದ್ದು ಈಗಾಗಲೇ ದುರಸ್ತಿ ಕಾಮಗಾರಿಗಳನ್ನು ಕೈಗೊಂಡಿದ್ದು ಪ್ರಗತಿಯಲ್ಲಿರುತ್ತದೆ ಎಂದು ಮಂಗಳೂರು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ತಿಳಿಸಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…