ಮಳೆ ಹಿನ್ನೆಲೆ : ಕೊಡಗಿನ ಮೂಲಕ ಮರ ಹಾಗೂ ಮರಳು ಸಾಗಾಟಕ್ಕೆ ನಿರ್ಬಂಧ

June 13, 2019
9:00 AM

ಮಡಿಕೇರಿ : ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಕೊಡಗಿನ ಮೂಲಕ ಮರ ಮತ್ತು ಮರಳು ಸಾಗಾಟ ಮಾಡುವುದನ್ನು ನಿಷೇಧಿಸಿ ಆದೇಶಿಸಿದೆ. 2019 ಜೂನ್ 12 ರಿಂದ ಆಗಸ್ಟ್ 8 ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

Advertisement
Advertisement

ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ. ಈ ಹಿನ್ನಲೆಯಲ್ಲಿ ಜೂನ್ 12 ರಿಂದ ಆಗಸ್ಟ್ 8 ರವರೆಗೆ ವಾಹನ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಜಿಲ್ಲಾದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.

Advertisement

ನಿರ್ಬಂಧಿತ ವಾಹನಗಳು :
ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು. ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು. ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು.

ವಿನಾಯಿತಿ ನೀಡಿದ ವಾಹನಗಳು :
ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು. ಹಾಲು ಪೂರೈಕೆ ವಾಹನಗಳು. ಸರಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು.ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) . ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988ರ ಸೆಕ್ಷನ್ 116ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅನುಮತಿಸಿದೆ.

Advertisement

ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ಗಸ್ತು ಕಾಯುವಂತೆ ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ದ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಗಾಲ ಎಫೆಕ್ಟ್‌ : ಗಗನಕ್ಕೇರಿದ ತರಕಾರಿ ದರ : ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ ಯಾವುದೂ ಮುಟ್ಟುವಂಗಿಲ್ಲ..
April 25, 2024
2:39 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ
ಅಡಿಕೆ ಹಳದಿ ಎಲೆರೋಗ | ಜನಪ್ರತಿನಿಧಿಗಳು ಮಾಡಬೇಕಾದ್ದೇನು..? | ಸರ್ಕಾರ ಮಾಡಬೇಕಾದ್ದೇನು..? | ಚುನಾವಣಾ ಸಮಯದಲ್ಲಿ ಏಕೆ ಚರ್ಚೆಯಾಗುತ್ತಿಲ್ಲ..?‌ |
April 23, 2024
7:00 AM
by: ಮಹೇಶ್ ಪುಚ್ಚಪ್ಪಾಡಿ
ಹಠ ಬಿಡದ ಕೆ ಎಸ್‌ ಈಶ್ವರಪ್ಪ | ಬಂಡಾಯವೆದ್ದ ಈಶ್ವರಪ್ಪ ಅವರನ್ನು ಉಚ್ಚಾಟಿಸಿದ ಬಿಜೆಪಿ |
April 22, 2024
10:47 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror