ಮಡಿಕೇರಿ : ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಕೊಡಗಿನ ಮೂಲಕ ಮರ ಮತ್ತು ಮರಳು ಸಾಗಾಟ ಮಾಡುವುದನ್ನು ನಿಷೇಧಿಸಿ ಆದೇಶಿಸಿದೆ. 2019 ಜೂನ್ 12 ರಿಂದ ಆಗಸ್ಟ್ 8 ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ. ಈ ಹಿನ್ನಲೆಯಲ್ಲಿ ಜೂನ್ 12 ರಿಂದ ಆಗಸ್ಟ್ 8 ರವರೆಗೆ ವಾಹನ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಜಿಲ್ಲಾದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.
ನಿರ್ಬಂಧಿತ ವಾಹನಗಳು :
ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು. ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು. ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು.
ವಿನಾಯಿತಿ ನೀಡಿದ ವಾಹನಗಳು :
ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು. ಹಾಲು ಪೂರೈಕೆ ವಾಹನಗಳು. ಸರಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು.ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) . ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988ರ ಸೆಕ್ಷನ್ 116ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅನುಮತಿಸಿದೆ.
ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ಗಸ್ತು ಕಾಯುವಂತೆ ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ದ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…