ಸುಳ್ಯ: ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡದ 206ನೇ ವಾರದ ಶ್ರಮದಾನ ಮಡಪ್ಪಾಡಿ ಶಾಲೆಯ ಆವರಣದಲ್ಲಿ ಶನಿವಾರ ನಡೆಯಿತು. ಶಾಲೆಯ ಮುಂಭಾಗದ ಆವರಣದಲ್ಲಿ ಆವರಿಸಿ ಬೆಳೆದು ನಿಂತಿದ್ದ ಕಾಡು ಪೊದೆಯನ್ನು ಕಡಿದು ಸ್ವಚ್ಛಗೊಳಿಸಲಾಯಿತು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಡಪ್ಪಾಡಿಯಲ್ಲಿ ಡಿ.22 ರಂದು ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮ ನಡೆಯುವ ಮಡಪ್ಪಾಡಿ ಶಾಲಾ ವಠಾರವನ್ನು ಸ್ವಚ್ಛಗೊಳಿಸಲಾಯಿತು. ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡವು 2104 ಅಕ್ಟೋಬರ್ 18ರಿಂದ ಆರಂಭಗೊಂಡು ಪ್ರತಿ ಶನಿವಾರ ಶ್ರಮದಾನ ಮತ್ತು ಸ್ವಚ್ಛತಾ ಕಾರ್ಯವನ್ನು ನಡೆಸುತ್ತಾ ಬಂದಿದ್ದು 206 ವಾರ ಪೂರ್ತಿಗೊಳಿಸಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…