ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಪಕ್ಷಗಳ ತುರ್ತು ಸಭೆ

November 12, 2019
7:09 PM

ನವದೆಹಲಿ:ಮಹಾರಾಷ್ಟ್ರದಲ್ಲಿ  ರಾಜಕೀಯ ಬಿಕ್ಕಟ್ಟು ಪರಿಗಣಿಸಿ ರಾಜ್ಯಪಾಲರ ವರದಿಯನ್ನು ಪರಿಶೀಲಿಸಿದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್  ಅನುಮೋದನೆ ನೀಡಿದ್ದು, ಇದರಿಂದ ಮಹಾರಾಷ್ಟ್ರದಲ್ಲಿ ಅಧಿಕೃತವಾಗಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕಸರತ್ತು ನಡೆಯುತ್ತಿರುವಾಗಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದ್ದು ರಾಜ್ಯದಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿಕೂಟಗಳು ಸರಕಾರ ರಚನೆಗೆ ಮುಂದಾಗಿಲ್ಲ. ಈ ಕಾರಣಕ್ಕಾಗಿ ರಾಷ್ಟ್ರಪತಿಗಳ ಆಳ್ವಿಕೆ ಜಾರಿ ಮಾಡುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಮಂಗಳವಾರ ಮಧ್ಯಾಹ್ನ ಶಿಫಾರಸು ಮಾಡಿದ್ದರು.

ಸರಕಾರ ರಚನೆಗೆ ಹಕ್ಕು ಮಂಡಿಸುವಂತೆ ಮೂರನೇ ಅತಿ ದೊಡ್ಡ ಪಕ್ಷವಾದ ಎನ್‌ಸಿಪಿಗೆ ರಾಜ್ಯಪಾಲರು ಸೋಮವಾರ ಆಹ್ವಾನ ನೀಡಿದ್ದರು. ಇದರ ಗಡುವು ಮಂಗಳವಾರ ರಾತ್ರಿ 8.30ಕ್ಕೆ ಮುಗಿಯುತ್ತಿತ್ತು. ಆದರೆ ಈ ಅವಧಿ ಮುಗಿಯುವ ಮೊದಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿರುವುದು  ಚರ್ಚೆಗೆ ಗ್ರಾಸವಾಗಿದೆ.

ಇದರ ವಿರುದ್ದ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಶಿವಸೇವಾ ಹೇಳಿದೆ.

ಈ ನಡುವೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡಿ ಶಿವಸೇವಾ ಹಾಗೂ ಎನ್ ಸಿ ಪಿ ಮುಖ್ಯಮಂತ್ರಿ ಸ್ಥಾನವನ್ನು ಸಮಾನ ಅವಧಿಗೆ ಹಂಚಿಕೊಳ್ಳುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೀಗ ಎನ್ ಸಿ ಪಿ ಹಾಗೂ ಕಾಂಗ್ರೆಸ್ ಜಂಟಿ ಸಭೆ ನಡೆಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು
June 14, 2026
6:54 AM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು
June 13, 2026
8:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror