ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ನ.28 ರಂದು ಪ್ರಮಾಣವಚನ ಸ್ವೀಕರಿಸಿದರು. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಪ್ರತಿಜ್ಞಾವಿಧಿ ಬೋಧಿಸಿದರು.
ಇದೇ ಸಂದರ್ಭ ಏಕನಾಥ್ ಸಂಭಾಜಿ ಶಿಂಧೆ, ಸುಭಾಷ್ ರಾಜಾರಾಂ ದೇಸಾಯಿ, ಬಾಳಾಸಾಹೇಬ್ ಥೋರಟ್, ನಿತಿನ್ ರಾವತ್, ಜಯಂತ್ ಪಾಟೀಲ್, ಛಗನ್ ಭುಜಬಲ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ದಕ್ಷಿಣ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಉದ್ಧವ್ ಠಾಕ್ರೆ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಬಾಳಾ ಠಾಕ್ರೆ ಕುಟುಂಬದ ಮೊದಲ ಮುಖ್ಯಮಂತ್ರಿಯಾಗಿರುವ ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕಾರಕ್ಕಾಗಿ ಶಿವಾಜಿ ಪಾರ್ಕ್ ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿತ್ತು.
ಸಮಾರಂಭದಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ, ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಡಿಎಂಕೆ ನಾಯಕ ಟಿ.ಆರ್.ಬಾಲು, ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್, ಎನ್ಸಿಪಿ ಮುಖಂಡ ಪ್ರಫುಲ್ ಪಟೇಲ್, ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಅವರ ಪತ್ನಿ ಸೇರಿ ಸೇರಿ ಅನೇಕರು ಭಾಗವಹಿಸಿದ್ದರು.
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…