ಮುಂಬೈ: ಮಹಾರಾಷ್ಟ್ರ ರಾಜಕಾರಣ ಶನಿವಾರ ಬೆಳಗ್ಗೆ ನಾಟಕೀಯ ತಿರುವು ಪಡೆದುಕೊಂಡಿದೆ. ಇದುವರೆಗೂ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ದಿಢೀರ್ ರಾಜಕೀಯ ಬೆಳವಣಿಗೆಯಂತೆ ಬಿಜೆಪಿಯ ದೇವೇಂದ್ರ ಫಡ್ನವಿಸ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಇಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಫಡ್ನಾವೀಸ್ರೊಂದಿಗೆ ನ್ಯಾಷನಲ್ ಕಾಂಗ್ರೆಸ್ ಪಕ್ಷ(ಎನ್ಸಿಪಿ)ದ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರ ರಾಜಕೀಯ ಲೆಕ್ಕಾಚಾರ ತಲೆಕೆಳಗಾಗಿದೆ.
ಶನಿವಾರ ಬೆಳಗ್ಗೆ ರಾಜಭವನದಲ್ಲಿ ಸರಳವಾಗಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಅವರು ಪ್ರಮಾಣ ವಚನ ಬೋಧಿಸಿದರು. ಫಡ್ನವಿಸ್ ಎರಡನೇ ಅವಧಿಗೆ ಮಹಾರಾಷ್ಟ್ರ ಸಿಎಂ ಆದರೆ, ಎನ್ಸಿಪಿ ಪಕ್ಷದ ಮುಖ್ಯಸ್ಥ ಶರಾದ್ ಪವಾರ್ ಸಂಬಂಧಿ ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಸಿಎಂ ಫಡ್ನವಿಸ್, ಮಹಾರಾಷ್ಟ್ರ ಜನರಿಗೆ ಬಿಜೆಪಿ ಸ್ಥಿರ ಸರ್ಕಾರ ನೀಡಲು ಬಯಸಿದೆ. ಮೈತ್ರಿ ಪಕ್ಷ ಶಿವಸೇನಾ ಜನರ ಆದೇಶವನ್ನು ಪಾಲಿಸಲಿಲ್ಲ. ಹೀಗಾಗಿ ಸರ್ಕಾರ ರಚನೆ ಮಾಡಲು ಬೆಂಬಲ ನೀಡಿದ ಎನ್ಸಿಪಿಗೆ ಧನ್ಯವಾದಗಳು. ಕಳೆದ ಕೆಲ ದಿನಗಳಿಂದ ರಾಷ್ಟ್ರಪತಿ ಆಳ್ವಿಕೆ ಇದುದ್ದನ್ನು ನಾವೆಲ್ಲ ನೋಡಿದ್ದೇವೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ ಈ ದಿಢೀರ್ ಬೆಳವಣಿಗೆ ರಾಜ್ಯದ ಅಭಿವೃದ್ಧಿಗೆ ಆಶಾದಾಯಕವಾಗಲಿದೆ ಎಂದು ತಿಳಿಸಿದ್ದಾರೆ.
ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಅಜಿತ್ ಪವಾರ್ ಮಾತನಾಡಿ ಫಲಿತಾಂಶ ಬಂದ ದಿನದಿಂದ ಇಲ್ಲಿಯವರೆಗೂ ಯಾವ ಪಕ್ಷವು ಸರ್ಕಾರ ರಚಿಸಲು ಸಮರ್ಥವಾಗಿರಲಿಲ್ಲ. ಇದರಿಂದ ರೈತರು ಸೇರಿದಂತೆ ಮಹಾರಾಷ್ಟ್ರವು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿತ್ತು. ಹೀಗಾಗಿ ಸರ್ಕಾರ ರಚಿಸಲು ನಾವು ನಿರ್ಧರಿಸಿದೆವು ಎಂದು ಹೇಳಿದರು.
ಕಳೆದ ಅಕ್ಟೋಬರ್ 21ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಿತು. ಬಳಿಕ ಅ. 24ರಂದು ಚುನಾವಣಾ ಫಲಿತಾಂಶ ಹೊರಬಿತ್ತು. ಒಟ್ಟು 288 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ 105, ಶಿವಸೇನಾ 56, ಎನ್ಸಿಪಿ 54 ಮತ್ತು ಕಾಂಗ್ರೆಸ್ 44 ಸ್ಥಾನಗಳಲ್ಲಿ ಜಯ ಸಾಧಿಸಿದ್ದವು. ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ 145 ಬೇಕಾಗಿದ್ದರಿಂದ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿರಲಿಲ್ಲ. ಆದರೆ, ಬಹುಕಾಲದವರೆಗೆ ಮೈತ್ರಿ ಪಕ್ಷಗಳಾಗಿದ್ದ ಬಿಜೆಪಿ-ಶಿವಸೇನಾಗೆ ಬಹುಮತ ದೊರೆತಿದ್ದರು ಸಿಎಂ ಸ್ಥಾನ ಹಂಚಿಕೆಗೆ ಶಿವಸೇನಾ ಪಟ್ಟು ಹಿಡಿಯಿತು. ಆದರೆ ಬಿಜೆಪಿ ಸಿಎಂ ಸ್ಥಾನ ಬಿಟ್ಟುಕೊಡಲು ತಯಾರಿರಲಿಲ್ಲ. ಹೀಗೆ ಹಲವು ದಿನಗಳವರೆಗೆ ನಡೆದ ಹಗ್ಗಜಗ್ಗಾಟದ ಬಳಿಕ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಯಿತು. ಇದರ ನಡುವೆ ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಮಾತುಕತೆ ನಡೆಸಿ ಮೈತ್ರಿ ಮಾಡಿಕೊಳ್ಳುವ ಹಂತಕ್ಕೆ ಬಂದಿದ್ದವು. ಶುಕ್ರವಾರ(ನವೆಂಬರ್ 22) ಮೈತ್ರಿ ಘೋಷಣೆ ಮಾಡಿಕೊಳ್ಳಲಿವೆ. ಇನ್ನೇನು ಸರ್ಕಾರ ರಚನೆ ಆಗಲಿದೆ ಎನ್ನುವಷ್ಟರಲ್ಲಿ ಮಹಾರಾಷ್ಟ್ರ ರಾಜಕಾರಣ ಶನಿವಾರ ಸ್ಫೋಟಕ ತಿರುವು ಪಡೆದುಕೊಂಡಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…