ನವದೆಹಲಿ: ಸದ್ಯದಲ್ಲಿಯೇ ಅವಧಿ ಮುಕ್ತಾಯಗೊಳ್ಳಲಿರುವ ಮಹಾರಾಷ್ಟ್ರ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಯು ಒಂದೇ ಹಂತದಲ್ಲಿ ಅಕ್ಟೋಬರ್ 21ರಂದು ನಡೆಯಲಿದ್ದು, 24ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣೆ ಆಯೋಗದ ಮುಖ್ಯಸ್ಥ ಸುನಿಲ್ ಅರೋರಾ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ದಿನಾಂಕ ಜಾರಿಯಾಗಿರುವುದರಿಂದಾಗಿ ಇಂದಿನಿಂದಲೇ ಈ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಹರಿಯಾಣದಲ್ಲಿ ಸುಮಾರು 1.82 ಕೋಟಿ ಮತದಾರರ ನೋಂದಣಿಯಾಗಿದ್ದು, ಮಹಾರಾಷ್ಟ್ರದಲ್ಲಿ 8.94 ಕೋಟಿ ಮತದಾರರು ಇದ್ದಾರೆ. ವಿಧಾನಸಭೆ ಚುನಾವಣೆಗಾಗಿ ಚುನಾವಣೆ ವೆಚ್ಚದ ಮೇಲೆ ನಿಗಾ ಇಡಲು ಇಬ್ಬರು ವೀಕ್ಷಕರನ್ನು ಮಹಾರಾಷ್ಟ್ರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ವಿವಿಧ ರಾಜ್ಯಗಳ ಉಪಚುನಾವಣೆ ಅ. 21ಕ್ಕೆ
ಇನ್ನುಳಿದಂತೆ ಅರುಣಾಚಲ್ ಪ್ರದೇಶ, ಬಿಹಾರ, ಛತ್ತೀಸ್‌ಗಢ, ಅಸ್ಸಾಂ, ಗುಜರಾತ್, ಹಿಮಾಚಲ ಪ್ರದೇಶ, ಕೇರಳ, ಮಧ್ಯಪ್ರಧೇಶ, ಮೇಘಾಲಯ, ಒಡಿಶಾ, ಪಾಂಡಿಚೆರಿ, ಪಂಜಾಬ್, ರಾಜಸ್ತಾನ, ಸಿಕ್ಕಿಂ, ತಮಿಳುನಾಡು, ತೆಲಂಗಾಣ ಮತ್ತು ಉತ್ತರ ಪ್ರದೇಶದಲ್ಲಿ ಉಪಚುನಾವಣೆಯು ಅ. 21ರಂದು ನಡೆಯಲಿದ್ದು, ಅ. 24ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.
ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…
ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ…
ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…