ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆ ಏಳು ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ ಆರು ಗಂಟೆವರೆಗೂ ನಡೆಯಲಿದೆ. ಮತದಾರರು ಉತ್ಸಾಹದಿಂದ ಮತಗಟ್ಟೆಗಳತ್ತ ಸಾಗುತ್ತಿದ್ದಾರೆ.
ಮಹಾರಾಷ್ಟ್ರದ 288 ವಿಧಾನಸಭೆ ಸ್ಥಾನಗಳು, ಹಾಗೂ ಹರಿಯಾಣದ 90 ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಮೈತ್ರಿ ಮಾಡಿಕೊಂಡಿದ್ದು, 150 ಸ್ಥಾನಗಳಲ್ಲಿ ಬಿಜೆಪಿ ಹಾಗೂ 124 ಸ್ಥಾನಗಳಲ್ಲಿ ಶಿವಸೇನೆ ಸ್ಪರ್ಧಿಸುತ್ತಿವೆ. ಕಾಂಗ್ರೆಸ್ ಹಾಗೂ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಗಳು ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿದಿವೆ. ಮಹಾರಾಷ್ಟ್ರದಲ್ಲಿ ಅಂದಾಜು 8.9 ಕೋಟಿ ಮಂದಿ ಮತದಾನ ಮಾಡಲಿದ್ದಾರೆ.
ಹರಿಯಾಣದಲ್ಲಿ ಕಾಂಗ್ರೆಸ್, ಬಿಜೆಪಿ, ಇಂಡಿಯನ್ ನ್ಯಾಷನಲ್ ಲೋಕದಳ್ ಮತ್ತು ಜನ್ನಾಯಕ್ ಜನತಾ ಪಾರ್ಟಿ(ಜೆಜೆಪಿ) ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. 1169 ಮಂದಿ ಕಣದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…