Advertisement
ವಿಶೇಷ ವರದಿಗಳು

“ಮಹಾ” ಭಯ ದೂರವಾಯಿತು ಈಗ ಬುಲ್ ಬುಲ್…!

Share

ಮಂಗಳೂರು: ಮತ್ತೆ ಚಂಡಮಾರುತದ ಪ್ರಭಾವ ಶುರುವಾಗಿದೆ. ಕ್ಯಾರ್ , ಮಹಾ ಚಂಡಮಾರುತವು ಅರಬೀ ಸಮುದ್ರದಲ್ಲಿ  ಕಂಡುಬಂದು ಕರಾವಳಿ ಪ್ರದೇಶ ಹಾಗೂ ಒಳನಾಡಿನಲ್ಲಿ  ಭಾರೀ ಮಳೆಯ ಸೂಚನೆ ನೀಡಿ ಬಳಿಕ  ತಣ್ಣಗಾಯಿತು. ಸದ್ಯ ಗುಜರಾತ್ ಕರಾವಳಿ ತೀರದಲ್ಲಿದ್ದರೂ ದುರ್ಬಲವಾಗುತ್ತಾ ಸಾಗಿದೆ. ಯಾವುದೇ ಆತಂಕವಿಲ್ಲ. ಮುಂಬಯಿ ಸೇರಿದಂತೆ ಕೆಲವು ಕಡೆ ಮಳೆಯಾಗಲಿದೆ.

ಆದರೆ ಈಗ ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತವಾಗಿ ಬುಲ್ ಬುಲ್ ಚಂಡಮಾರುತ ಕಂಡುಬಂದಿದೆ. ಈಗಾಗಲೇ ಒಡಿಶಾ, ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಹೈ ಎಲರ್ಟ್ ಘೋಷಣೆ ಮಾಡಲಾಗಿದೆ. ಬುಲ್ ಬುಲ್ ಪರಿಣಾಮವಾಗಿ  ಕೇರಳ, ತಮಿಳುನಾಡು , ಕರ್ನಾಟಕದಲ್ಲಿ  ನ.8, 9, 10 ರಂದು ಮಳೆಯಾಗಲಿದೆ. ನ.12 ರವರೆಗೆ ಈ ಚಂಡಮಾರುತದ ಪ್ರಭಾವ ಇದೆ.

ಬುಲ್ ಬುಲ್ ಚಂಡಮಾರುತವು ಒಡಿಶಾದಲ್ಲಿ ಪ್ರಭಾವ ಬೀರಲಿದೆ. ಈಗಾಗಲೇ ಒಡಿಶಾದ 16 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ಪಶ್ಚಿಮ ಬಂಗಾಳದಲ್ಲೂ ಪ್ರಭಾವ ಬೀರಲಿದೆ. ಈಗಿನ ಪ್ರಕಾರ ಅಂಡಮಾನ್ ನಿಕೋಬಾರ್ ನಲ್ಲಿ ಮುಂದಿನ 24 ಗಂಟೆಗಳಲ್ಲಿ  ಮಳೆಯಾದರೆ ನ.9 ಹಾಗೂ 10 ರಂದು ಬುಲ್ ಬುಲ್ ಒಡಿಶಾಕ್ಕೆ ಪ್ರವೇಶಿಸಿ ಭಾರೀ ಮಳೆಯಾಗಲಿದೆ.ಕರ್ನಾಟಕ ಕರಾವಳಿ ಭಾಗ, ಮಲೆನಾಡು, ಗುಜರಾತ್ ,ಒಡಿಶಾದಲ್ಲಿ ಚಂಡಮಾರುತ ಪ್ರಭಾವ ಇರಲಿದೆ.

ಪಶ್ಚಿಮ ಬಂಗಾಳದಲ್ಲಿ ನ.10 ಹಾಗೂ 11 ರಂದು ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ. ಇದೇ ಸಂದರ್ಭ ನ.8 ರಿಂದ 10 ರವರೆಗೆ  ರಾಜ್ಯದ ಕರಾವಳಿ ಹಾಗೂ ಒಳನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬುಲ್ ಬುಲ್ ಚಂಡಮಾರುತದ ಪ್ರಭಾವದಿಂದ ರಾಜ್ಯದ  ಶಿವಮೊಗ್ಗ, ಧಾರವಾಡ, ಕೊಡಗು, ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8 ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬುಲ್ ಬುಲ್ ನಿಂದಾಗಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದ್ದರೂ  ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸುಳ್ಯ ನ್ಯೂಸ್.ಕಾಂ ಅ.24 ರಂದು ಹವಾಮಾನದ ಬಗ್ಗೆ ವಿಶ್ಲೇಷಣೆ ಮಾಡಿತ್ತು. 3 ಚಂಡಮಾರುತದ ಪ್ರಭಾವ ಇದೆ ಎಂಬ ಹವಾಮಾನ ಇಲಾಖೆಯ ವರದಿಯ ವಿಶ್ಲೇಷಣೆ ಇಲ್ಲಿದೆ…

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

11 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

19 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

20 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

20 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago