ಮುಂಬೈ : ನಾಟಕೀಯ ಬೆಳವಣಿಗೆಯಲ್ಲಿ ಎರಡನೇ ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ ಬಳಿಕ, ಇದೀಗ ಶಿವಸೇನೆಯ ಮುಖಂಡ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣವಚನಕ್ಕೆ ಡಿಸೆಂಬರ್ 1 ರ ಬದಲಾಗಿ ನ.28 ರಂದೇ ಪ್ರಮಾಣವಚನಕ್ಕೆ ದಿನ ನಿಗದಿಯಾಗಿದೆ.ಶಿವಾಜಿ ಪಾರ್ಕ್ ನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಶಿವಸೇನಾ ಮುಖ್ಯಸ್ಥ ಹಾಗೂ ‘ಮಹಾ ವಿಕಾಸ ಅಘಾದಿ’ ಮೈತ್ರಿಕೂಟದ ನಾಯಕ ಉದ್ಧವ್ ಠಾಕ್ರೆ ಅವರು ಮಂಗಳವಾರ ರಾತ್ರಿ ಸರ್ಕಾರ ರಚನೆಯ ಹಕ್ಕು ಮಂಡಿಸಿ ಡಿ.1 ರಂದು ಪ್ರಮಾಣವಚನ ಎಂದು ದಿನ ನಿಗದಿ ಮಾಡಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಗುರುವಾರವೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದರು. ಶಿವಸೇನಾ, ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷಗಳ ಶಾಸಕರ ಸಭೆಯಲ್ಲಿ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ ಅಘಾದಿ ಮೈತ್ರಿಕೂಟದ ನಾಯಕನಾಗಿ ಆಯ್ಕೆ ಮಾಡಿದ ಬಳಿಕ ಮುಂದಿನ ಬೆಳವಣಿಗಗಳು ನಡೆದವು.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490