ಮುಂಬೈ : ನಾಟಕೀಯ ಬೆಳವಣಿಗೆಯಲ್ಲಿ ಎರಡನೇ ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ ಬಳಿಕ, ಇದೀಗ ಶಿವಸೇನೆಯ ಮುಖಂಡ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ಪೀಕರಿಸಲು ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 1ರಂದು ಶಿವಾಜಿ ಪಾರ್ಕ್ ನಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬುಧವಾರ ಬಹುಮತ ಸಾಬೀತುಪಡಿಸುವಂತೆ ಫಡ್ನವೀಸ್ ಸರಕಾರಕ್ಕೆ ಸುಪ್ರೀಂ ಕೋರ್ಟ್ ಡೆಡ್ ಲೈನ್ ನೀಡಿತ್ತು. ಆದರೆ ಬಹುಮತ ಇಲ್ಲದ ಕಾರಣ ಮಹಾರಾಷ್ಟ್ರದ ಸಿಎಂ ಆಗಿದ್ದ ಬಿಜೆಪಿಯ ದೇವೇಂದ್ರ ಫಡ್ನವೀಸ್ ಮಂಗಳವಾರ ಸಂಜೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್ ಸಿ ಪಿ ಮೈತ್ರಿ ಪಕ್ಷದ ಸರ್ಕಾರ ಮಹಾರಾಷ್ಟ್ರದಲ್ಲಿ ಅಸ್ಥಿತ್ವಕ್ಕೆ ಬರಲಿದ್ದು, ಸಿಎಂ ಆಗಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ನಡೆದ ಶಿವಸೇನೆ, ಕಾಂಗ್ರೆಸ್, ಎನ್ ಸಿಪಿ ಪಕ್ಷಗಳ ಜಂಟಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನಾಗಿ ಉದ್ಧವ್ ಠಾಕ್ರೆ ಅವರನ್ನು ಆಯ್ಕೆ ಮಾಡಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel