ಮಹಿಳಾ ಕ್ರಿಕೆಟ್- ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಕ್ಕೆ ಎಂಟು ವಿಕೆಟ್​ಗಳ ಗೆಲುವು

October 9, 2019
9:28 PM

ಮುಂಬೈ: ವಡೋದರಾದಲ್ಲಿ ನಡೆದ ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ ಭಾರತದ ಮಹಿಳಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಎಂಟು ವಿಕೆಟ್ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್​ ಮಾಡಿದ ದಕ್ಷಿಣ ಆಫ್ರಿಕಾ 45.4 ಓವರ್ ನಲ್ಲಿ 164 ರನ್​ಗಳ ಆಲ್ ಔಟ್ ಆಯಿತು. ನಂತರ ಬ್ಯಾಟ್​ ಮಾಡಿದ ಭಾರತ 41.4 ಓವರ್ ನಲ್ಲಿ 2 ವಿಕೆಟ್​ಗಳ ನಷ್ಟಕ್ಕೆ 165 ರನ್​ ಗಳಿಸುವ ಮೂಲಕ ಗೆಲುವಿನ ನಗು ಬೀರಿತು.

ಹೊಸ ದಾಖಲೆ ನಿರ್ಮಿಸಿದ ಕ್ಯಾಪ್ಟನ್​ ಮಿಥಾಲಿ ರಾಜ್​

ಭಾರತದ ಮಹಿಳಾ ಕ್ರಿಕೆಟ್​ ತಂಡದ ಟೆಸ್ಟ್​ ಹಾಗೂ ಏಕದಿನ ಪಂದ್ಯಾವಳಿಯ ನಾಯಕಿ ಮಿಥಾಲಿ ರಾಜ್​ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 20ಕ್ಕಿಂತಲೂ ಹೆಚ್ಚು ವರ್ಷ ನೆಲೆನಿಂತ ಮೊದಲ ಮಹಿಳಾ ಕ್ರಿಕೆಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇಂದು ವಡೋದರಾದ ರಿಲಯನ್ಸ್​ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಏಕದಿನ ಪಂದ್ಯಾವಳಿಯಲ್ಲಿ ಆಡುವ ಮೂಲಕ ಈ ಸಾಧನೆಯನ್ನು ತಮ್ಮ ಮುಡಿಗೇರಿಸಿಕೊಂಡರು. ದಕ್ಷಿಣ ಆಫ್ರಿಯಾ ವಿರುದ್ಧ 11* ಗಳಿಸಿದರು. ಈ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಎಂಟು ವಿಕೆಟ್​ಗಳ ಗೆಲುವು ಸಾಧಿಸಿದೆ.

ಮಿಥಾಲಿ ರಾಜ್​ ಅವರು 1999ರ ಜೂನ್​ 26ರಂದು ಐರ್ಲೆಂಡ್​ ವಿರುದ್ಧ ತಮ್ಮ ಮೊದಲ ಏಕದಿನ ಪಂದ್ಯ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದರು. ಅವರೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟು 20 ವರ್ಷದ ಮೇಲೆ 105 ದಿನಗಳಾಗಿವೆ. ಏಕದಿನ ಪಂದ್ಯಾವಳಿಗಳನ್ನು 20 ವರ್ಷಗಳಿಂದ ಆಡುತ್ತಿರುವ ಮೊದಲ ಮಹಿಳಾ ಕ್ರಿಕೆಟರ್​ ಎಂಬ ಹೆಗ್ಗಳಿಕೆಯೂ ಮಿಥಾಲಿಯವರದ್ದಾಗಿದೆ.
ಮಹಿಳಾ ಕ್ರಿಕೆಟ್​ನಲ್ಲಿ ಅತಿಹೆಚ್ಚು ಏಕದಿನ ಪಂದ್ಯಗಳನ್ನು ಆಡುವ ಮೂಲಕ ಮಿಥಾಲಿ ದಾಖಲೆ ನಿರ್ಮಿಸಿದ್ದಾರೆ. ಈಗಿನವರೆಗೆ 204 ಒನ್​ ಡೇ ಮ್ಯಾಚ್​ಗಳನ್ನು ಆಡಿದ್ದಾರೆ. ಈವರು ಮೊದಲ ಸ್ಥಾನದಲ್ಲಿದ್ದು ಎರಡನೇ ಸ್ಥಾನದಲ್ಲಿ ಇಂಗ್ಲೆಂಡ್​ನ ಎಡ್ವರ್ಸ್​ (191 ಪಂದ್ಯ), ಹಾಗೂ ಮೂರನೇ ಸ್ಥಾನದಲ್ಲಿ ಭಾರತದ ಮಾಜಿ ಕ್ಯಾಪ್ಟನ್​ ಆಗಿದ್ದ ಜೂಲನ್​ ಗೋಸ್ವಾಮಿ (178) ಇದ್ದಾರೆ.

ಮಿಥಾಲಿ ರಾಜ್​ ಅವರು 10 ಟೆಸ್ಟ್​ ಪಂದ್ಯಗಳನ್ನು, 89 ಟಿ-20 ಪಂದ್ಯಾವಳಿಗಳನ್ನೂ ಆಡಿದ್ದಾರೆ. ಕಳೆದ ತಿಂಗಳಷ್ಟೇ ಟಿ-20 ಕ್ರಿಕೆಟ್​ನಿಂದ ನಿವೃತ್ತಿ ಪಡೆದಿದ್ದು, ಹರ್ಮನ್ ಪ್ರೀತ್ ಕೌರ್ ನಾಯಕಿಯಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror