ಸುಳ್ಯ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿ ಆಚರಣೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ನಡೆಸಲಾಯಿತು. ನುಡಿನಮನ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಇಂದಿರಾ ಗಾಂಧಿ ಯವರು ಸಾಮಾಜಿಕ ನ್ಯಾಯವನ್ನು ತಮ್ಮ ಆಡಳಿತದಲ್ಲಿ ಅಳವಡಿಸಿ ಭಾರತದ ಅಭಿವೃದ್ದಿಯಲ್ಲಿ ತನ್ನದೇ ಆದ ಚಾಪನ್ನು ಮೂಡಿಸಿದವರು. ಅವರೊಬ್ಬ ಸಾರ್ವಕಾಲಿಕ ನಾಯಕಿಯಾಗಿ ಇಂದಿಗೂ ಆದರ್ಶಪ್ರಾಯರಾಗಿದ್ದಾರೆ ಎಂದು ಹೇಳಿದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಭರತ್ ಮುಂಡೋಡಿ ನುಡಿನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ, ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಶ್ರೀಹರಿ ಕುಕ್ಕುಡೇಲು, ಪಕ್ಷದ ವಕ್ತಾರ ನಂದರಾಜ್ ಸಂಕೇಶ, ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ, ಡಿಸಿಸಿ ಸದಸ್ಯೆ ಜ್ಯೂಲಿಯನ ಕ್ರಾಸ್ತಾ , ನಗರ ಪಂಚಾಯತ್ ಸದಸ್ಯ ಧೀರಾ ಕ್ರಾಸ್ತಾ, ಮಹಮ್ಮದ್ ಪವಾಜ್ , ಯುವಕಾಂಗ್ರೆಸ್ ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ , ಗಂಗಾಧರ ಮೇನಾಲ ಉಪಸ್ಥಿತರಿದ್ದರು.
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…