ಮಾದಕ ವಸ್ತುಗಳ ಪತ್ತೆಗೆ ತಂಡ ರಚನೆ

July 11, 2019
11:30 AM

ಸುಳ್ಯ: ಮಾದಕ ವಸ್ತುಗಳ ಸೇವನೆ,ದಾಸ್ತಾನು ಮಾರಾಟ,ಮುಂತಾದವುಗಳನ್ನು ಪತ್ತೆಹಚ್ಚಿ ಪೊಲೀಸರಿಗೊಪ್ಪಿಸಲು ಸುಳ್ಯ ವಲಯ SKSSF ವಿಖಾಯ ತಂಡವು ಪಣತೊಟ್ಟಿದೆ.
ಸ್ಥಳೀಯ ಮಟ್ಟದಲ್ಲಿ ವಿಖಾಯ ಸ್ವಯಂ ಸೇವಕರು ಆಯಕಟ್ಟಿನ ಪ್ರದೇಶಗಳಲ್ಲಿ ಈ ಬಗ್ಗೆ ಜಾಗರೂಕರಾಗಿ ನಿಗಾವಹಿಸಲು ಸೂಚಿಸಲಾಗಿದೆ.

Advertisement
Advertisement
Advertisement

ಮಾದಕ ವಸ್ತುಗಳನ್ನು ಉಪಯೋಗಿಸುವುದು ಮಾರಾಟ ಮಾಡುವುದು,ದಾಸ್ತಾನಿರಿಸುವುದು ಗಮನಕ್ಕೆ ಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು,ಎಂದು ಸುಳ್ಯ ವಲಯ ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಕಾರ್ಯಕರ್ತರು ಭಯಪಡುವ ಅಗತ್ಯವಿಲ್ಲ, ನೀವು ನೀಡುವ ಮಾಹಿತಿಯು ಸಂಪೂರ್ಣ ಗುಪ್ತವಾಗಿರುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು ಯಾರಿಗಾದರೂ ಕಾರ್ಯಕರ್ತರಿಗೆ ಈ ಬಗ್ಗೆ ಮಾದಕ ವಸ್ತುಗಳ ಬಗ್ಗೆ ಮಾಹಿತಿ ದೊರೆತರೆ ಸುಳ್ಯ ವಲಯ ವಿಖಾಯ ತಂಡಕ್ಕೆ ತಿಸಿದರೆ ವಿಖಾಯ ಸಮಿತಿಯು ಈ ಬಗ್ಗೆ ಇಲಾಖೆಗೆ ದೂರು ನೀಡಳಿರುವುದಾಗಿ ತಿಳಿಸಲಾಗಿದೆ.

Advertisement

ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು ವಿಖಾಯ ಸಮಿತಿಯೊಂದಿಗೆ ಸಾರ್ವಜನಿಕರು ಕೂಡಾ ಸಹಕಾರ ನೀಡಬೇಕೆಂದು ಅವರು ಕರೆ ನೀಡಿದ್ದಾರೆ.
ಇದೇ ಬರುವ ಆದಿತ್ಯವಾರ ಮಂಡೆಕೋಲು ಮಸೀದಿಯ ಪರಿಸರದಲ್ಲಿ ನಡೆಯಲಿರುವ ವಿಖಾಯ ತುರ್ತು ಸೇವೆಗಳ ತರಬೇತಿ ಶಿಬಿರದಲ್ಲಿ ಸುಳ್ಯ ಪೊಲೀಸ್ ಠಾಣಾಧಿಕಾರಿ ಕಾನೂನು ಮಾಹಿತಿ ಹಾಗೂ ಮಾದಕ ವಸ್ತುಗಳ ಉಪಯೋಗದಿಂದಾಗುವ ದುಷ್ಪರಿಣಾಮಗಳ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?
January 22, 2025
6:48 AM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror