ಸುಳ್ಯ: ಮಾದಕ ವಸ್ತುಗಳ ಸೇವನೆ,ದಾಸ್ತಾನು ಮಾರಾಟ,ಮುಂತಾದವುಗಳನ್ನು ಪತ್ತೆಹಚ್ಚಿ ಪೊಲೀಸರಿಗೊಪ್ಪಿಸಲು ಸುಳ್ಯ ವಲಯ SKSSF ವಿಖಾಯ ತಂಡವು ಪಣತೊಟ್ಟಿದೆ.
ಸ್ಥಳೀಯ ಮಟ್ಟದಲ್ಲಿ ವಿಖಾಯ ಸ್ವಯಂ ಸೇವಕರು ಆಯಕಟ್ಟಿನ ಪ್ರದೇಶಗಳಲ್ಲಿ ಈ ಬಗ್ಗೆ ಜಾಗರೂಕರಾಗಿ ನಿಗಾವಹಿಸಲು ಸೂಚಿಸಲಾಗಿದೆ.
ಮಾದಕ ವಸ್ತುಗಳನ್ನು ಉಪಯೋಗಿಸುವುದು ಮಾರಾಟ ಮಾಡುವುದು,ದಾಸ್ತಾನಿರಿಸುವುದು ಗಮನಕ್ಕೆ ಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು,ಎಂದು ಸುಳ್ಯ ವಲಯ ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಕಾರ್ಯಕರ್ತರು ಭಯಪಡುವ ಅಗತ್ಯವಿಲ್ಲ, ನೀವು ನೀಡುವ ಮಾಹಿತಿಯು ಸಂಪೂರ್ಣ ಗುಪ್ತವಾಗಿರುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು ಯಾರಿಗಾದರೂ ಕಾರ್ಯಕರ್ತರಿಗೆ ಈ ಬಗ್ಗೆ ಮಾದಕ ವಸ್ತುಗಳ ಬಗ್ಗೆ ಮಾಹಿತಿ ದೊರೆತರೆ ಸುಳ್ಯ ವಲಯ ವಿಖಾಯ ತಂಡಕ್ಕೆ ತಿಸಿದರೆ ವಿಖಾಯ ಸಮಿತಿಯು ಈ ಬಗ್ಗೆ ಇಲಾಖೆಗೆ ದೂರು ನೀಡಳಿರುವುದಾಗಿ ತಿಳಿಸಲಾಗಿದೆ.
ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು ವಿಖಾಯ ಸಮಿತಿಯೊಂದಿಗೆ ಸಾರ್ವಜನಿಕರು ಕೂಡಾ ಸಹಕಾರ ನೀಡಬೇಕೆಂದು ಅವರು ಕರೆ ನೀಡಿದ್ದಾರೆ.
ಇದೇ ಬರುವ ಆದಿತ್ಯವಾರ ಮಂಡೆಕೋಲು ಮಸೀದಿಯ ಪರಿಸರದಲ್ಲಿ ನಡೆಯಲಿರುವ ವಿಖಾಯ ತುರ್ತು ಸೇವೆಗಳ ತರಬೇತಿ ಶಿಬಿರದಲ್ಲಿ ಸುಳ್ಯ ಪೊಲೀಸ್ ಠಾಣಾಧಿಕಾರಿ ಕಾನೂನು ಮಾಹಿತಿ ಹಾಗೂ ಮಾದಕ ವಸ್ತುಗಳ ಉಪಯೋಗದಿಂದಾಗುವ ದುಷ್ಪರಿಣಾಮಗಳ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…