ಮಾನವೀಯ ನೆಲೆಗಟ್ಟಿನಡಿ ಪರಿಹಾರ ವಿತರಿಸಲು ಜೆಡಿಎಸ್ ಒತ್ತಾಯ

September 10, 2019
4:00 PM

ಮಡಿಕೇರಿ  : ಮಹಾಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ದಾಖಲೆಗಳನ್ನೇ ಆಧಾರವಾಗಿಸದೆ ಮಾನವೀಯ ನೆಲೆಗಟ್ಟಿನಡಿ ಪರಿಹಾರ ವಿತರಿಸುವಂತೆ ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಸರಕಾರವನ್ನು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement

ಜಿಲ್ಲಾ ಜೆಡಿಎಸ್ ವತಿಯಿಂದ ಕಾಂಡನಕೊಲ್ಲಿಯ ನಿರಾಶ್ರಿತ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಸಂದರ್ಭ ಅವರು ಮಾತನಾಡಿದರು. ಪ್ರವಾಹ ಮತ್ತು ಭೂಕುಸಿತದಿಂದ ಕೊಡಗಿನ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹಲವು ಕುಟುಂಬಗಳು ವಾಸದ ಮನೆಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಅಸಹಾಯಕ ಸ್ಥಿತಿಯಲ್ಲಿರುವ ಸಂತ್ರಸ್ತರಿಗೆ ಮಾನವೀಯತೆಯ ಆಧಾರದಲ್ಲಿ ಪರಿಹಾರವನ್ನು ಸಕಾಲದಲ್ಲಿ ಒದಗಿಸದೆ ದಾಖಲೆಗಳನ್ನೇ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಗಣೇಶ್ ಟೀಕಿಸಿದರು.

Advertisement

ಕಾಂಡನಕೊಲ್ಲಿಯ ಬಾವುಕ ಮತ್ತು ಬೀಪಾತು ಎಂಬುವವರು ಅಣ್ಣ ತಂಗಿಯರಾಗಿದ್ದು, ಕಳೆದ 45 ವರ್ಷಗಳಿಂದ ವಾಸವಿದ್ದ ಮನೆಯನ್ನು ಮಹಾಮಳೆಯಿಂದ ಕಳೆದುಕೊಂಡಿದ್ದಾರೆ. ಇವರ ಮನೆಗೆ ಹಕ್ಕುಪತ್ರ ದೊರೆಯದೆ ಇದ್ದ ಕಾರಣವನ್ನೇ ನೆಪ ಮಾಡಿಕೊಂಡು ಮನೆ ಕಳೆದುಕೊಂಡವರಿಗೆ ನೀಡಲಾಗುವ ಪರಿಹಾರದ ಮೊತ್ತವನ್ನು ನೀಡದೆ ವಂಚಿಸಲಾಗಿದೆ. ವಾರಸುದಾರರು ಯಾರೂ ಇಲ್ಲದೆ ವೃದ್ಧಾಪ್ಯದ ದಿನಗಳನ್ನು ಕಳೆಯುತ್ತಿರುವ ಇವರಿಬ್ಬರ ಬದುಕು ಅತಂತ್ರವಾಗಿದೆ. ಆದ್ದರಿಂದ ಜಿಲ್ಲಾಡಳಿತ ದಾಖಲೆಗಳನ್ನು ಕಡ್ಡಾಗೊಳಿಸದೆ ಪ್ರತ್ಯಕ್ಷವಾಗಿ ಕಾಣುತ್ತಿರುವ ನಷ್ಟವನ್ನು ತುಂಬಿಕೊಡಬೇಕೆಂದು ಗಣೇಶ್ ಒತ್ತಾಯಿಸಿದರು. ಇದೇ ರೀತಿಯ ಅನೇಕ ಪ್ರಕರಣಗಳು ಜಿಲ್ಲೆಯಲ್ಲಿದ್ದು, ಸಂತ್ರಸ್ತರು ಪರಿಹಾರದಿಂದ ವಂಚಿತರಾಗದಂತೆ ಸರಕಾರ ಸೂಕ್ತ ನಿರ್ದೇಶನ ನೀಡಿ ಪರಿಹಾರದ ಮೊತ್ತವನ್ನು ಸಮಾನವಾಗಿ ಹಂಚಿಕೆ ಮಾಡಬೇಕೆಂದು ಅವರು ಹೇಳಿದರು.

ಮನೆ ಕಳೆದುಕೊಂಡಿರುವ ಅಣ್ಣ, ತಂಗಿಗೆ ಜೆಡಿಎಸ್ ವತಿಯಿಂದ ಆರ್ಥಿಕ ನೆರವನ್ನು ವಿತರಿಸಲಾಯಿತು. ಈ ಸಂದರ್ಭ ಪಕ್ಷದ ಪ್ರಮುಖರಾದ ಸುನೀಲ್, ಡೆನ್ನಿ ಬರೋಸ್, ಷರೀಫ್, ಅಬ್ದುಲ್ಲ, ಯೂಸುಫ್. ಹನೀಫ್ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...