ಸುಳ್ಯ: ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳು ಕೂಟ ದುಗಲಡ್ಕ ಇದರ ಆಶ್ರಯದಲ್ಲಿ ಮಿತ್ರ -ಕುರಲ್ ಸಾಂಸ್ಕೃತಿಕ ಸಂಭ್ರಮ ಹಾಗೂ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್ ಶಿಪ್ ಸೊಸೈಟಿ ನವದೆಹಲಿ ಇವರಿಂದ ರಾಷ್ಟ್ರೀಯ ಗೌರವ ಅವಾರ್ಡ್‍ಗೆ ಭಾಜನರಾದ ಕೆ.ಟಿ.ವಿಶ್ವನಾಥರಿಗೆ ಸನ್ಮಾನ ಕಾರ್ಯಕ್ರಮ ಮಾ.1ರಂದು ದುಗಲಡ್ಕ ಪ್ರೌಢಶಾಲಾ ವಠಾರದಲ್ಲಿ ನಡೆಯುಲಿದೆ ಎಂದು ಸಂಘಟನಾ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ ಕೆ.ಎ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಗೌರವ ಅವಾರ್ಡ್ ಪುರಸ್ಕೃತರಾದ ಕೆ.ಟಿ.ವಿಶ್ವನಾಥ ಅವರನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್‍ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಸನ್ಮಾನಿಸಲಿದ್ದಾರೆ. ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಅಭಿನಂದನಾ ಭಾಷಣ ಮಾಡಲಿದ್ದಾರೆ. ಮಿತ್ರ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಪುರುಷೋತ್ತಮ ಗೌಡ ಮಾಣಿಬೆಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯ ರಾದ ಎಸ್.ಎನ್.ಮನ್ಮಥ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಅರೆಭಾಷೆ ಅಕಾಡೆಮಿಯ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ದೆಹಲಿ ಕನ್ನಡ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ, ನ.ಪಂ.ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ನ.ಪಂ.ಸದಸ್ಯರಾದ ಶಶಿಕಲಾ ನೀರಬಿದಿರೆ, ಬಾಲಕೃಷ್ಣ ರೈ ದುಗಲಡ್ಕ, ದುಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು. ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಾಹಿತಿ ಭೀಮರಾವ್ ವಾಷ್ಠರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಸಂಜೆ 5 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಸಂಘಟನಾ ಸಮಿತಿಯ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಕೋಶಾಧಿಕಾರಿ ಮನೋಜ್ ಪಾನತ್ತಿಲ, ಕುರಲ್ ತುಳು ಕೂಟದ ಅಧ್ಯಕ್ಷ ನಾರಾಯಣ ಟೈಲರ್, ಪದಾಧಿಕಾರಿಗಳಾದ ರಮೇಶ್ ನೀರಬಿದಿರೆ, ಭಾಗೀಶ್ ಕೆ.ಟಿ., ಕೃಷ್ಣ ಸ್ವಾಮಿ, ಸುರೇಶ್ ನಾಯಕ್ ಉಪಸ್ಥಿತರಿದ್ದರು.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…