Advertisement
ಸುದ್ದಿಗಳು

ಮಾ.1ರಂದು ದುಗಲಡ್ಕದಲ್ಲಿ ಸಾಂಸ್ಕೃತಿಕ ಸಂಭ್ರಮ ಮತ್ತು ಸನ್ಮಾನ

Share

ಸುಳ್ಯ: ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳು ಕೂಟ ದುಗಲಡ್ಕ ಇದರ ಆಶ್ರಯದಲ್ಲಿ ಮಿತ್ರ -ಕುರಲ್ ಸಾಂಸ್ಕೃತಿಕ ಸಂಭ್ರಮ ಹಾಗೂ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್ ಶಿಪ್ ಸೊಸೈಟಿ ನವದೆಹಲಿ ಇವರಿಂದ ರಾಷ್ಟ್ರೀಯ ಗೌರವ ಅವಾರ್ಡ್‍ಗೆ ಭಾಜನರಾದ ಕೆ.ಟಿ.ವಿಶ್ವನಾಥರಿಗೆ ಸನ್ಮಾನ ಕಾರ್ಯಕ್ರಮ ಮಾ.1ರಂದು ದುಗಲಡ್ಕ ಪ್ರೌಢಶಾಲಾ ವಠಾರದಲ್ಲಿ ನಡೆಯುಲಿದೆ ಎಂದು ಸಂಘಟನಾ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ ಕೆ.ಎ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಗೌರವ ಅವಾರ್ಡ್ ಪುರಸ್ಕೃತರಾದ ಕೆ.ಟಿ.ವಿಶ್ವನಾಥ ಅವರನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್‍ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಸನ್ಮಾನಿಸಲಿದ್ದಾರೆ. ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಅಭಿನಂದನಾ ಭಾಷಣ ಮಾಡಲಿದ್ದಾರೆ. ಮಿತ್ರ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಪುರುಷೋತ್ತಮ ಗೌಡ ಮಾಣಿಬೆಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯ ರಾದ ಎಸ್.ಎನ್.ಮನ್ಮಥ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಅರೆಭಾಷೆ ಅಕಾಡೆಮಿಯ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ದೆಹಲಿ ಕನ್ನಡ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ, ನ.ಪಂ.ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ನ.ಪಂ.ಸದಸ್ಯರಾದ ಶಶಿಕಲಾ ನೀರಬಿದಿರೆ, ಬಾಲಕೃಷ್ಣ ರೈ ದುಗಲಡ್ಕ, ದುಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು. ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಾಹಿತಿ ಭೀಮರಾವ್ ವಾಷ್ಠರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಸಂಜೆ 5 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಸಂಘಟನಾ ಸಮಿತಿಯ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಕೋಶಾಧಿಕಾರಿ ಮನೋಜ್ ಪಾನತ್ತಿಲ, ಕುರಲ್ ತುಳು ಕೂಟದ ಅಧ್ಯಕ್ಷ ನಾರಾಯಣ ಟೈಲರ್, ಪದಾಧಿಕಾರಿಗಳಾದ ರಮೇಶ್ ನೀರಬಿದಿರೆ, ಭಾಗೀಶ್ ಕೆ.ಟಿ., ಕೃಷ್ಣ ಸ್ವಾಮಿ, ಸುರೇಶ್ ನಾಯಕ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

3 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago