ಮಾ.8ರಿಂದ ಮಾವಿನಪಳ್ಳ ಶ್ರೀ ಮಹಮ್ಮಾಯಿ ದೇವಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ

February 18, 2020
10:16 PM

ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮಾವಿನಪಳ್ಳ ಶ್ರೀ ಮಹಮ್ಮಾಯಿ ದೇವಿ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮಾ.8 ರಿಂದ 13ರ ತನಕ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸುರೇಶ್ ಕಣೆಮರಡ್ಕ ತಿಳಿಸಿದ್ದಾರೆ.

Advertisement
Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾ.8 ರಂದು ಪವಿತ್ರ ಗಂಗಾಜಲ ಮತ್ತು ಹಸಿರುವಾಣಿ ಮೆರವಣಿಗೆ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು. ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸುವರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸುವರು. ಪ್ರತಿ ದಿನ ವಿವಿಧ ಕಾರ್ಯಕ್ರಮಗಳು ಧಾರ್ಮಿಕ ಸಭೆ ನಡೆಯಲಿದೆ. ಮಾ.11 ರಂದು ಸಂಜೆ.6.30 ರಿಂದ ಮಾತೃ ಸಂಗಮ ನಡೆಯಲಿದೆ‌ ಒಡಿಯೂರು ಗುರುದೇವ ದತ್ತ ಸಂಸ್ಥಾನಮ್ ನ ಮಾತಾನಂದಮಯಿ ಆಶೀರ್ವಚನ ನೀಡುವರು. ಜಿ.ಪಂ‌.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆ ವಹಿಸುವರು. ಮಾ.12 ರಂದು ಸಂಜೆ.6.30 ಗ್ರಾಮ ಸಂಗಮ ನಡೆಯಲಿದ್ದು ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮುಖ್ಯ ಅತಿಥಯಾಗುವರು.

Advertisement

ಮಾ.13 ರಂದು ಬೆಳಿಗ್ಗೆ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠೆ, ಕಲಾಶಾಭೊಷೇಕ ನಡೆಯಲಿದೆ.  ಸಂಜೆ.6.30ರಿಂದ ಸಾಮರಸ್ಯ ಸಂಗಮ ನಡೆಯಲಿದೆ. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸುವರು. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡುವರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸಲುಲಿದ್ದಾರೆ‌. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಧಾರ್ಮಿಕ ಉಪನ್ಯಾಸ ನೀಡುವರು ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಚನಿಯ ಕಲ್ತಡ್ಕ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶೀನಪ್ಪ ಬಯಂಬು, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ, ರಾಘವ ಎಂ.ಎ‌.ನೆಹರೂ ನಗರ ಉಪಸ್ಥಿತರಿದ್ದರು.

Advertisement

ಗ್ರಾಮದಲ್ಲಿ ಗಂಗಾಜಲ ವಿತರಣೆ:  ಬ್ರಹ್ಮಕಲಶೋತ್ಸವ ಪ್ರಯುಕ್ತ ಕಲಶದ ರೂಪದಲ್ಲಿ ಇಡೀ ಗ್ರಾಮದಲ್ಲಿ ಗಂಗಾಜಲ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾಶಿ ಮತ್ತು ಹರಿದ್ವಾರದಿಂದ ಗಂಗಾಜಲವನ್ನು ತಂದು ವಿತರಿಸಲಾಗುವುದು ಎಂದು ಸುರೇಶ್ ಕಣೆಮರಡ್ಕ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ |
January 23, 2025
8:49 PM
by: The Rural Mirror ಸುದ್ದಿಜಾಲ
ಪ್ರಯಾಗ್ ರಾಜ್ ನಲ್ಲಿ  ಮಹಾ ಕುಂಭಮೇಳ | 150ಕ್ಕೂ ಹೆಚ್ಚು ವಿಶೇಷ ರೈಲು
January 23, 2025
10:59 AM
by: The Rural Mirror ಸುದ್ದಿಜಾಲ
ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ
January 23, 2025
10:50 AM
by: The Rural Mirror ಸುದ್ದಿಜಾಲ
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆ – ಸರ್ಕಾರ ಒಪ್ಪಂದ | ಕಾಫಿ ಉದ್ಯಮ ಉತ್ತೇಜಿಸಲು ಮಹತ್ವದ ಹೆಜ್ಜೆ |
January 23, 2025
10:46 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror