ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮಾವಿನಪಳ್ಳ ಶ್ರೀ ಮಹಮ್ಮಾಯಿ ದೇವಿ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮಾ.8 ರಿಂದ 13ರ ತನಕ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸುರೇಶ್ ಕಣೆಮರಡ್ಕ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾ.8 ರಂದು ಪವಿತ್ರ ಗಂಗಾಜಲ ಮತ್ತು ಹಸಿರುವಾಣಿ ಮೆರವಣಿಗೆ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು. ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸುವರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸುವರು. ಪ್ರತಿ ದಿನ ವಿವಿಧ ಕಾರ್ಯಕ್ರಮಗಳು ಧಾರ್ಮಿಕ ಸಭೆ ನಡೆಯಲಿದೆ. ಮಾ.11 ರಂದು ಸಂಜೆ.6.30 ರಿಂದ ಮಾತೃ ಸಂಗಮ ನಡೆಯಲಿದೆ ಒಡಿಯೂರು ಗುರುದೇವ ದತ್ತ ಸಂಸ್ಥಾನಮ್ ನ ಮಾತಾನಂದಮಯಿ ಆಶೀರ್ವಚನ ನೀಡುವರು. ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆ ವಹಿಸುವರು. ಮಾ.12 ರಂದು ಸಂಜೆ.6.30 ಗ್ರಾಮ ಸಂಗಮ ನಡೆಯಲಿದ್ದು ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮುಖ್ಯ ಅತಿಥಯಾಗುವರು.
ಮಾ.13 ರಂದು ಬೆಳಿಗ್ಗೆ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠೆ, ಕಲಾಶಾಭೊಷೇಕ ನಡೆಯಲಿದೆ. ಸಂಜೆ.6.30ರಿಂದ ಸಾಮರಸ್ಯ ಸಂಗಮ ನಡೆಯಲಿದೆ. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸುವರು. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡುವರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸಲುಲಿದ್ದಾರೆ. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಧಾರ್ಮಿಕ ಉಪನ್ಯಾಸ ನೀಡುವರು ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಚನಿಯ ಕಲ್ತಡ್ಕ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶೀನಪ್ಪ ಬಯಂಬು, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ, ರಾಘವ ಎಂ.ಎ.ನೆಹರೂ ನಗರ ಉಪಸ್ಥಿತರಿದ್ದರು.
ಗ್ರಾಮದಲ್ಲಿ ಗಂಗಾಜಲ ವಿತರಣೆ: ಬ್ರಹ್ಮಕಲಶೋತ್ಸವ ಪ್ರಯುಕ್ತ ಕಲಶದ ರೂಪದಲ್ಲಿ ಇಡೀ ಗ್ರಾಮದಲ್ಲಿ ಗಂಗಾಜಲ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾಶಿ ಮತ್ತು ಹರಿದ್ವಾರದಿಂದ ಗಂಗಾಜಲವನ್ನು ತಂದು ವಿತರಿಸಲಾಗುವುದು ಎಂದು ಸುರೇಶ್ ಕಣೆಮರಡ್ಕ ತಿಳಿಸಿದ್ದಾರೆ.
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ…
ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ…
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…