ಸುಳ್ಯ: ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ಕನ್ನಡ ವಿಭಾಗದಿಂದ ಸಣ್ಣ ಕಥೆ ಬರೆಯುವ ಕಾರ್ಯಾಗಾರ “ಮಿಂಚುಳ್ಳಿ”ಯನ್ನು ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಏರ್ಪಡಿಸಲಾಗಿತ್ತು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಸಣ್ಣ ಕಥೆಯನ್ನು ಫಲಕದಲ್ಲಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಸುಮಾರು 60 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಏಕಕಾಲದಲ್ಲಿ ಕಥೆಗಳನ್ನು ಬರೆದರು.
ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್, ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಾವಿತ್ರಿ, ಕಲಾ ವಿಭಾಗದ ಉಪನ್ಯಾಸಕ ಹರೀಶ್ ಉಪಸ್ಥಿತರಿದ್ದರು. ಉಪನ್ಯಾಸಕಿ ಬೇಬಿ ವಿದ್ಯಾ ಸ್ವಾಗತಿಸಿ, ವಂದಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel