ಮಂಗಳೂರು: ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈಗ ಎಲ್ಲರೂ ಬಿ ಎಲರ್ಟ್ ಇರಬೇಕಾಗಿದೆ. ಏಕೆಂದರೆ ನೇತ್ರಾವತಿ, ಕುಮಾರಧಾರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಜಿಲ್ಲಾಡಳಿತ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಮಳೆಯ ಕಾರಣದಿಂದ ಸಮುದ್ರ ಅಲೆಗಳು 3.2 ರಿಂದ 3.9 ಮೀಟರ್ ಎತ್ತರದಲ್ಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ನೇತ್ರಾವತಿ, ಕುಮಾರಧಾರ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಸೂಚಿಸಲಾಗಿದೆ. 13 ಜನರ ಎನ್ ಡಿ ಆರ್ ಎಫ್ ತಂಡವು ಸುಬ್ರಹ್ಮಣ್ಯ, ಮಂಗಳೂರಿನಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇದೆ.
ಜಿಲ್ಲೆಯಲ್ಲಿ ಗಂಜಿ ಕೇಂದ್ರ ತೆರೆಯಲಾಗಿದ್ದು
ಮಂಗಳೂರಿನಲ್ಲಿ 12, ಬಂಟ್ವಾಳ 2, ಬೆಳ್ತಂಗಡಿ 7, ಪುತ್ತೂರು ,ಮೂಡುಬಿದಿರೆ,ಕಡಬದಲ್ಲಿ ತಲಾ ಒಂದು, ಸುಳ್ಯ ತಾಲೂಕಿನಲ್ಲಿ 2 ಕಡೆ ಕೇಂದ್ರ ತೆರೆಯಲಾಾಗಿದೆ.
ಯಾವುದೇ ತುರ್ತು ಸಹಾಯಕ್ಕೆ ಸಾರ್ವಜನಿಕರು ಇಲಾಖೆಗಳನ್ನು ಸಂಪರ್ಕಿಲು ಕೋರಲಾಗಿದೆ.
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…