ಮಂಗಳೂರು/ಬೆಂಗಳೂರು: ಕೊರೋನಾ ಅಬ್ಬರ ಭಾನುವಾರವೂ ಮುಂದುವರಿದೆ. ಭಾನುವಾರ ರಾಜ್ಯದಲ್ಲಿ 4,120 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ 2156 ಪ್ರಕರಣಗಳು ವರದಿಯಾಗಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ285 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ರಾಜ್ಯದಲ್ಲಿ 4,120 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63,772ಕ್ಕೆ ಏರಿಕೆಯಾಗಿದೆ. 1290 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 23,065 ಮಂದಿ ಗುಣಮುಖರಾಗಿದ್ದಾರೆ. ಭಾನುವಾರ ಒಂದೇ ದಿನ 91 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,331ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರದಂದು 285 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ. 104 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಜಿಲ್ಲೆಯಲ್ಲಿ 1491 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಂತಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಕೊರೋನಾಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರು ಮೂಲದ 77 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಕ್ಯಾನ್ಸರ್, ಅಸ್ತಮಾದಿಂದ ಬಳಲುತ್ತಿದ್ದ ಬಳಲುತ್ತಿದ್ದರು. ಮಂಗಳೂರು ಮೂಲದ 53 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಉಡುಪಿ ಜಿಲ್ಲೆಯಲ್ಲಿ 134 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದು ಭಾನುವಾರ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…