ಸುಳ್ಯ: ಜಲಸಂರಕ್ಷಣೆಯ ಉದ್ದೇಶದಿಂದ ಮನೆಮನೆ ಇಂಗುಗುಂಡಿ ಅಭಿಯಾನ ಹಮ್ಮಿಕೊಂಡಿರುವ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಅಭಿಯಾನ ಮುಂದುವರಿದಿದೆ. ಕುಕ್ಕುಜಡ್ಕದ ಪ್ರೌಢಶಾಲೆ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಹಾಗೂ ಎಲಿಮಲೆ ಸರಕಾರಿ ಪ್ರೌಢಶಾಲೆ, ಕುಕ್ಕುಜಡ್ಕದ ಪ್ರೌಢಶಾಲೆ, ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ಅಭಿಯಾನ ನಡೆಯಿತು. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಪ್ರತಿಕ್ರಿಯೆ ನೀಡಿದರು.
ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಜಲಾಮೃತ ಯೋಜನೆಯ ಅಡಿಯಲ್ಲಿ ಮನೆಮನೆ ಇಂಗುಗುಂಡಿ ಅಭಿಯಾನ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಬುಧವಾರದಂದು ನಾಲ್ಕು ಪ್ರೌಢಶಾಲೆಗಳಲ್ಲಿ ಸುಮಾರು 650 ವಿದ್ಯಾರ್ಥಿಗಳನ್ನು ಇಂಗು ಗುಂಡಿ ನಿರ್ಮಿಸುವಂತೆ ಪ್ರೇರೇಪಿಸಲು ಸಾಧ್ಯವಾಯಿತು. ಎಲ್ಲಾ ಕಡೆಗಳಲ್ಲಿ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸದಸ್ಯರು ಸಹಕಾರ ನೀಡಿದ್ದಾರೆ. ಎಲ್ಲಾ ಶಾಲೆಗಳಲ್ಲಿ ಮಕ್ಕಳು ಇಂಗು ಗುಂಡಿ ನಿರ್ಮಿಸಲು ಸ್ವಯಂ ಪ್ರೇರಣೆ ಹೊಂದಿದ್ದಾರೆ.
ಕುಕ್ಕುಜಡ್ಕದ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳೂ ಸೇರಿ 130 ಮಂದಿ ಇದ್ದರು.
ಎಲಿಮಲೆ ಜ್ಞಾನದೀಪ ಪ್ರೌಢಶಾಲೆಯಲ್ಲಿ 250 ವಿದ್ಯಾರ್ಥಿಗಳು, ಎಲಿಮಲೆಯ ಸರಕಾರಿ ಪ್ರೌಢಶಾಲೆಯಲ್ಲಿ 190 ವಿದ್ಯಾರ್ಥಿಗಳು ಹಾಗೂ ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ 100 ವಿದ್ಯಾರ್ಥಿಗಳು ನೀರಿಂಗಿಸುವ ಬಗ್ಗೆ ಅರಿವು ನೀಡಲಾಯಿತು.
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490